ಆಪ್ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ದೌರ್ಜನ್ಯ: ಈ ಕುರಿತು ಪ್ರಶ್ನಿಸಿದ್ದಕ್ಕೆ ಮೈಕ್‌ ಪಕ್ಕಕ್ಕಿಟ್ಟ ಕೇಜ್ರಿವಾಲ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ (Swati Maliwal) ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಮಾತನಾಡಲು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Aravind Kejriwal) ನಿರಾಕರಿಸಿದ್ದಾರೆ.

ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಜೊತೆಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಪ್ರಶ್ನೆ ಕೇಳಿದಾಗ ಮಾತನಾಡಲು ನಿರಾಕರಿಸಿದ ಅವರು ತಮ್ಮ ಮುಂದಿದ್ದ ಮೈಕ್ ಅನ್ನು ಪಕ್ಕಟ್ಟಿದ್ದಾರೆ.

ಅರವಿಂದ್ ಕೇಜ್ರಿವಾಲ್ ಮಾತನಾಡಲು ನಿರಾಕರಿಸುತ್ತಿದ್ದಂತೆ ಈ ಬಗ್ಗೆ ಮಾತನಾಡಿದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ (Sanjay Sing), ಮಣಿಪುರದಲ್ಲಿ ನಡೆದ ಘಟನೆಗಳನ್ನು ನೋಡಿ ಇಡೀ ದೇಶವೇ ನೋವು ಅನುಭವಿಸಿದೆ ಆದರೆ ಪ್ರಧಾನಿ ಮೋದಿ ಈ ಬಗ್ಗೆ ಮೌನವಾಗಿದ್ದರು. ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದರು ಆಗಲೂ ಸುಮ್ಮನಿದ್ದರು. ನಮ್ಮ ಕುಸ್ತಿಪಟುಗಳು ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಡಿಸಿಡಬ್ಲ್ಯು ಮುಖ್ಯಸ್ಥೆ ಸ್ವಾತಿ ಮಲಿವಾಲ್‌ಗೆ ಪೊಲೀಸರು ಥಳಿಸಿದ್ದರು. ಈ ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಮೌನ ವಹಿಸಿದ್ದರು ಎಂದು ಹೇಳಿದರು.

ಮೊದಲು ನಾನು ಹೇಳಿದ ಈ ಎಲ್ಲಾ ವಿಚಾರಗಳಿಗೆ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಉತ್ತರಿಸಬೇಕು, ಸ್ವಾತಿ ಮಲಿವಾಲ್ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಸ್ವಾತಿ ಮಲಿವಾಲ್ ಪ್ರಕರಣದಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗೆ ಸಂಸದ ಸಂಜಯ್ ಸಿಂಗ್ ತಿರುಗೇಟು ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!