Friday, August 19, 2022

Latest Posts

ಅವಾಚ್ಯ ಶಬ್ದಗಳಿಂದ ನಿಂದನೆ: ನೊಂದ ವೃದ್ಧ ಆತ್ಮಹತ್ಯೆ

ಹೊಸ ದಿಗಂತ ವರದಿ, ಮೈಸೂರು:

ಜಮೀನಿಗೆ ನೀರು ಹರಿಸುವ ವಿಚಾರದಲ್ಲಿ ನಡೆದ ಜಗಳದಲ್ಲಿ ಸಹೋದರನ ಮನೆಯವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನಿಸಿದ್ದರಿಂದ ನೊಂದ ವೃದ್ಧನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಶೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಕುಳ್ಳ ಶೆಟ್ಟಿ (60) ಆತ್ಮಹತ್ಯೆ ಮಾಡಿಕೊಂಡ ವೃದ್ಧ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಮೃತರ ಸಹೋದರ ಮಾದಶೆಟ್ಟಿ, ಸಹೋದರನ ಪತ್ನಿ ಸುಬ್ಬಮ್ಮ, ಪುತ್ರ ಸೋಮಣ್ಣ ಹಾಗು ಆತನ ಪತ್ನಿ ಮಧು ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
ಕುಳ್ಳಶೆಟ್ಟಿ ಮತ್ತು ಅವರ ಸಹೋದರ ಮಾದಶೆಟ್ಟಿ, ದುಗ್ಗಹಳ್ಳಿ ಶಿವಮೂರ್ತಿ ಅವರ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿರುವಾಗ ಜಮೀನಿಗೆ ನೀರು ಹರಿಸುವ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿದೆ. ಈ ವೇಳೆ ನಾಲ್ವರು ಆರೋಪಿಗಳು ಕುಳ್ಳಶೆಟ್ಟಿ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿರುವುದಲ್ಲದೇ ಸಹೋದರನ ಸೊಸೆ ಮಧು ಪೊಲೀಸ್ ಠಾಣೆಯಲ್ಲಿ ಮಾನಭಂಗ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.
ಇದರಿಂದ ನೊಂದ ಕುಳ್ಳಶೆಟ್ಟಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು, ತಮ್ಮ ತಂದೆ ಸಾವಿಗೆ ಮಾದಶೆಟ್ಟಿ ಕುಟುಂಬದ ಸದಸ್ಯರು ಕಾರಣ ಎಂದು ಕುಳ್ಳಶೆಟ್ಟಿ ಮಗ ಮಂಜುನಾಥ್ ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ಪೊಲೀಸರು ನಾಲ್ವರನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!