Sunday, August 14, 2022

Latest Posts

ನಿಂದನಾತ್ಮಕ ಸುದ್ದಿಗಳ ಪ್ರಸಾರಕ್ಕೆ ತಡೆ: ಸಚಿವರ ಅರ್ಜಿ ಮಾನ್ಯ ಮಾಡಿದ ಕೋರ್ಟ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮಾಧ್ಯಮಗಳು ತಮ್ಮ ವಿರುದ್ಧ ಯಾವುದೇ ರೀತಿಯ ನಿಂದನಾತ್ಮಕ ಸುದ್ದಿಗಳನ್ನು ಪ್ರಸಾರ ಮಾಡದಂತೆ ರಾಜ್ಯದ ಆರು ಸಚಿವರು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ ಮಾನ್ಯ ಮಾಡಿದೆ.
ತಮ್ಮ ವಿರುದ್ಧ ಸುಳ್ಳು, ದಾಖಲೆ ರಹಿತ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ.ಪಾಟೀಲ್, ಹೆಚ್.ಟಿ.ಸೋಮಶೇಖರ್,‌ ಕೆ.ಸುಧಾಕರ್, ನಾರಾಯಣಗೌಡ, ಭೈರತಿ ಬಸವರಾಜ್ ಶುಕ್ರವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಈ ಹಿನ್ನೆಲೆ ಸಚಿವರ ವಿರುದ್ಧ ಸಳ್ಳು ಹಾಗೂ ಆಧಾರರಹಿತ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿ ಮಧ್ಯಂತರ ಆದೇಶ ಮಾಡಿದ CCH 20 ರ ನ್ಯಾಯಾಧೀಶ ಬಿ.ಎಸ್.ವಿಜಯಕುಮಾರ್ ಅವರು ಅರ್ಜಿ ಕುರಿತು ರಾಜ್ಯದ ಎಲ್ಲ ಮಾಧ್ಯಮಗಳಿಗೂ ತುರ್ತು ನೊಟೀಸ್ ಜಾರಿಗೊಳಿಸಿದ್ದಾರೆ. ಮಾ.31ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss