ಹೊಸದಿಗಂತ ವರದಿ,ಕಲಬುರಗಿ:
ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ನಿಸ್ವಾರ್ಥ ಸೇವೆ ಬಿತ್ತುವ ಏಕೈಕ ಸಂಘಟನೆಯೆಂದರೆ,ಅದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಎಂದು ಕಲಬುರಗಿ ವಿಭಾಗದ ಕೋಶ ಪ್ರಮುಖರಾದ ಸೂಯ೯ಕಾಂತ ರಾಕಲೆ ಅಭಿಮತ ವ್ಯಕ್ತಪಡಿಸಿದರು.
ಮಂಗಳವಾರ ನಗರದ ಭಾವಸಾರ ಭವನದಲ್ಲಿ ಜರುಗಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್,ನ ಜಿಲ್ಲಾ ಸಮ್ಮೇಳನದಲ್ಲಿ ಮಾತನಾಡಿದ ಅವರು,ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸುಮಾರು 75 ವರ್ಷಗಳಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೇವೆ ಮಾಡುತ್ತಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಉಂಟಾದಾಗ ಮುಂಚೂಣಿಯಲ್ಲಿರುವ ಸಂಘಟನೆಯಾಗಿದೆ. ಹಾಗೆಯೇ ವಿದ್ಯಾರ್ಥಿಗಳಲ್ಲಿ,ಯುವಕರಲ್ಲಿ ದೇಶಭಕ್ತಿಯನ್ನು ಬಿತ್ತುತ್ತ ಕೆಲಸ ಮಾಡುತ್ತಿರುವ ಏಕೈಕ ಸಂಘಟನೆಯಾಗಿದೆ ಎಂದು ಅಭಿಮತವನ್ನು ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಸಮ್ಮೇಳನವನ್ನು ಉದ್ಗಾಟನೆ ಮಾಡಿದ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಭೀಮಾಶಂಕರ ಬಿಲಗುಂದಿ ಮಾತನಾಡಿ,ರಾಷ್ಟ್ರ ಕಟ್ಟುವ ಕೆಲಸದಲ್ಲಿ ಸ್ವಾಮಿ ವಿವೇಕಾನಂದರು ತಮ್ಮ ಸೊಂಟಕ್ಕೆ ಬಟ್ಟೆಯನ್ನು ಕಟ್ಟಿಕ್ಕೊಂಡು ತಿರುಗಾಡಿದರು. ಅದರಂತೆ, ಪ್ರಸ್ತುತ ಸನ್ನೀವೆಶದಲ್ಲಿ ವಿದ್ಯಾರ್ಥಿಗಳ ಮನಸ್ಸನ್ನು ಕಟ್ಟುವ ಕೆಲಸದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್,ನ ಕಾರ್ಯಕರ್ತರು ಕಾಯ೯ಕತ೯ರು ಮುಂಚೂಣಿ ಇದ್ದಾರೆ. ಈಗಿನ ಯುವಜನತೆಯು ವಿದ್ಯಾರ್ಥಿ ವಿದ್ಯಾರ್ಥಿನಿಯರು ನಾವೆಲ್ಲ ಒಂದೇ ಎಂಬ ಭಾವದೊಂದಿಗೆ ಮುನ್ನಡೆಯಬೇಕಾಗಿದೆ ಎಂದು ಹೇಳಿದರು.
ಇದಕ್ಕೂ ಮುನ್ನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ನೂರಾರು ಯುವಕ-ಯುವತಿಯರು ಅದ್ಧೂರಿಯಾಗಿ ಶೋಭಾಯಾತ್ರೆ ನಡೆಸಿದರು. ಈ ಸಂದರ್ಭದಲ್ಲಿ ಎಬಿವಿಪಿ ಜಿಲ್ಲಾ ಪ್ರಮುಖರಾದ ಪ್ರಮೋದ ನಾಗೂರಕರ್, ವಿಭಾಗ ಸಂಚಾಲಕರಾದ ಅಭಿಷೇಕ್ ಬಾಳೆ, ರಾಷ್ಟ್ರೀಯ ಕಾರ್ಯಕಾರಿ ಸದಸ್ಯರಾದ ಹನುಮಂತ ಬಗಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.