ಹೊಸದಿಗಂತ, ವರದಿ ಚಿತ್ರದುರ್ಗ:
ರಾಜ್ಯ ಸರಕಾರವು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿ, ವಿದ್ಯಾರ್ಥಿಗಳ ತರಗತಿಗಳು ಸುಗಮವಾಗಿ ನಡೆಸುವಂತೆ ಅಗ್ರಹಿಸಿ ಅಖಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ಪದವಿ ಕಾಲೇಜುಗಳಲ್ಲಿ ಸರಿಯಾಗಿ ತರಗತಿಗಳು ನಡೆಯದೆ ವಿದ್ಯಾರ್ಥಿಗಳ ಪಠ್ಯ ಚಟುವಟಿಕೆಗಳಲ್ಲಿ ಹಿನ್ನಡೆ ಆಗುತ್ತಿದೆ. ಕೆಲವೊಂದು ವಿಶ್ವ ವಿದ್ಯಾಲಯಗಳು ಸೆಮಿಸ್ಟರ್ ಪರೀಕ್ಷೆಯನ್ನು ನಡೆಸುವ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿವೆ. ಆದರೆ ತರಗತಿಗಳು ಸರಿಯಾಗಿ ನಡೆಯದೆ ವಿಧ್ಯಾರ್ಥಿಗಳು ಹೇಗೆ ಪರೀಕ್ಷೆ ಬರೆಯಬೇಕಂಬ ಪ್ರಶ್ನೆ ವಿದ್ಯಾರ್ಥಿ ಸಮುದಾಯದವನ್ನು ಕಾಡುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.
ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ ಗೌರವಯುತ ಜೀವನ ನಡೆಸುವಂತೆ ಮಾಡುವುದು ಸರ್ಕಾರದ ಕರ್ತವ್ಯವಾಗಿದೆ. ರಾಜ್ಯ ಸರ್ಕಾರವು ಈ ವಿ?ಯದಲ್ಲಿ ಯಾವುದೇ ರೀತಿ ವಿಳಂಬ ಮಾಡದೆ ಅತಿಥಿ ಉಪನ್ಯಾಸಕರಿಗೆ ನೀಡುವ ಸಂಬಳವನ್ನು ಸರಕಾರಿ ನೌಕರರಿಗೆ ನೀಡುವ ಹಾಗೆ ಪ್ರತಿ ತಿಂಗಳು ನೀಡಬೇಕು. ಅತಿಥಿ ಉಪನ್ಯಾಕರಿಗೆ ಯುಜಿಸಿ ನಿಯಮಾವಳಿ ಪ್ರಕಾರ ವೇತನ ನೀಡಬೇಕು. ಈ ವಿ?ಯದಲ್ಲಿ ಸರಕಾರ ತಕ್ಷಣ ಪರಿಹಾರವನ್ನು ನೀಡಿ ತರಗತಿಗಳು ನಡೆಯಲು ಅನುವು ಮಾಡಿಕೊಡಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಸಮಸ್ಯೆಗೆ ಶಾಶ್ವತ ಪರಿಹಾರವಾಗಿ ಸರ್ಕಾರ ಕೂಡಲೇ ರಾಜ್ಯದ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು. ಅತಿಥಿ ಉಪನ್ಯಾಸಕರು ಕಾನೂನಾತ್ಮಕವಾಗಿ ಹೋರಾಟ ಮುಂದುವರಿಸಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೂಡಲೇ ತರಗತಿ ಬಹಿ?ರ ಹಿಂಪಡೆದು ಪಾಠ ಪ್ರವಚನಗಳನ್ನು ಆರಂಭಿಸಬೇಕು. ರಾಜ್ಯಸರ್ಕಾರವು ಈ ಕೂಡಲೇ ಅತಿಥಿ ಉಪನ್ಯಾಸಕರ ಜತೆಗೆ ಮಾತುಕತೆ ನಡೆಸಿ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಪರಿಶೀಲಿಸಿ, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕೂಡಲೇ ಮು?ರ ಕೊನೆಗೊಳಿಸುವಂತೆ ಮನ ಒಲಿಸಬೇಕೆಂದು ಆಗ್ರಹಿಸಿದರು.
ರಾಜ್ಯ ಕಾರ್ಯಕಾರಣಿ ಸದಸ್ಯ ಸುದರ್ಶನ್‌ನಾಯ್ಕ, ರಾಜ್ಯ ಕಾರ್ಯಕಾರಿಣಿ ಸದಸ್ಯ ಕನಕರಾಜ್ ಕೋಡಿಹಳ್ಳಿ, ಜಿಲ್ಲಾ ಸಂಚಾಲಕ ಸಿದ್ದೇಶ್, ನಗರ ಕಾರ್ಯದರ್ಶಿ ಗೋಪಿ, ಸಾಮಾಜಿಕ ಜಾಲತಾಣದ ಚಿತ್ರಸ್ವಾಮಿ, ಮಹಿಳಾ ಪ್ರಮುಖ್ ಚೈತ್ರ, ಹಾಸ್ಟೆಲ್ ಪ್ರಮುಖ್ ಮನೋಜ್, ಸಹ ಹಾಸ್ಟೆಲ್ ಪ್ರಮುಖ್ ಅಜ್ಜಯ್ಯ, ಮಹಿಳಾ ಸಹ ಪ್ರಮುಖ್ ಚಂದನ, ಕಾರ್ಯಕರ್ತರಾದ ಸುಮನ್, ದರ್ಶನ್, ತಿಪ್ಪೇಸ್ವಾಮಿ, ಸುದೀಪ್, ಮಧು, ಲಕ್ಷ್ಮೀ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.