ವಿಶ್ವವಿದ್ಯಾಲಯ ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಎಬಿವಿಪಿ ಪ್ರತಿಭಟನೆ

ಹೊಸದಿಗಂತ ವರದಿ, ಚಿತ್ರದುರ್ಗ 
ರಾಜ್ಯದ ೯ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯ ಕೇಂದ್ರಗಳು ಅಲ್ಲಿಂದ ಹೊರಡುವ ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯ ನಿರ್ವಹಿಸುವ ವ್ಯಕ್ತಿಗಳಾಗುತ್ತಾರೆ. ಅಂತಹ ವಿಶ್ವವಿದ್ಯಾಲಯಗಳಿಗೆ ಮೂಲಭೂತ ಸೌಲಭ್ಯಗಳನ್ನು ನೀಡುವುದು ಸರ್ಕಾರಗಳ ಆದ್ಯಕರ್ತವ್ಯ. ಆದರೆ ಕರ್ನಾಟಕ ರಾಜ್ಯದಲ್ಲಿ ಹಿಂದಿನ ಸರ್ಕಾರ ಘೋ?ಣೆ ಮಾಡಿದ್ದ ಹೊಸ ವಿಶ್ವವಿದ್ಯಾಲಯಗಳನ್ನು ಇಂದಿನ ರಾಜ್ಯ ಸರ್ಕಾರ ಮುಚ್ಚಲು ಹೊರಟಿರುವುದು ಖಂಡನೀಯ ಎಂದು ಪ್ರತತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸಚಿವ ಸಂಪುಟದ ಉಪ ಸಮಿತಿಯು ಆರ್ಥಿಕ ಹಾಗೂ ಮೂಲಭೂತ ಸೌಲಭ್ಯಗಳ ನೆಪವನ್ನು ಹೇಳಿ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವುದು ರಾಜ್ಯ ಸರ್ಕಾರದ ಶಿಕ್ಷಣ ವಿರೋಧಿ ನೀತಿಯಾಗಿದೆ. ಸರ್ಕಾರಗಳು ವಿಶ್ವವಿದ್ಯಾಲಯಗಳ ಸ್ಥಾಪನೆ ಹಾಗೂ ಮುಚ್ಚುವ ಮನಸೋ ಇಚ್ಛೆ ಕಾರ್ಯದಿಂದ ವಿಶ್ವವಿದ್ಯಾಲಯಗಳ ಮೇಲೆ ಮತ್ತು ಶೈಕ್ಷಣಿಕ ಕ್ಷೇತ್ರದ ಮೇಲೆ ಇರುವ ವಿಶ್ವಾಸಾರ್ಹತೆ ಕಡಿಮೆಯಾಗುತ್ತದೆ ಎಂದು ದೂರಿದರು.

 ರಾಜಕಾರಣಿಗಳು ರಾಜಕೀಯ ಲಾಭ ನಷ್ಟದ ಲೆಕ್ಕಾಚಾರದಿಂದ ನಿರ್ಣಯಗಳನ್ನು ಕೈಗೊಳ್ಳುತ್ತಾರೆ. ಆದರೆ ಶಿಕ್ಷಣ ತಜ್ಞರು, ಶಿಕ್ಷಣ ಪ್ರೇಮಿಗಳು ಶೈಕ್ಷಣಿಕ ಪ್ರಗತಿಯ ಬಗ್ಗೆ, ದೇಶದ ಭವಿಷ್ಯದ ಕುರಿತು ಚಿಂತನೆ ನಡೆಸುತ್ತಾರೆ. ಹಾಗಾಗಿ ಯಾವುದೇ ಶೈಕ್ಷಣಿಕ ವಿಚಾರಗಳು, ವಿಶ್ವವಿದ್ಯಾಲಯಗಳ ಕುರಿತು ಯಾವುದೇ ನಿರ್ಣಯಗಳನ್ನು ತೆಗೆದುಕೊಳ್ಳಬೇಕಾದರೆ ಶಿಕ್ಷಣ ತಜ್ಞರ ಸಲಹೆಗಳನ್ನು ತೆಗೆದುಕೊಳ್ಳಬೇಕೇ ಹೊರತು ರಾಜಕೀಯ ಕೇಂದ್ರಿತ ನಿರ್ಧಾರಗಳು ಆಗಬಾರದು ಎಂದ ಆಕ್ಷೇಪಿಸಿದರು.
ಸಾಮಾನ್ಯವಾಗಿ ೧೦,೦೦೦ ವಿದ್ಯಾರ್ಥಿಗಳ ಸಂಖ್ಯೆಗೆ ಒಂದು ವಿಶ್ವವಿದ್ಯಾಲಯಗಳು ಇರಬೇಕೆಂಬುದು ಆದರ್ಶವಾದ ವಿಚಾರವಾಗಿದೆ. ಆದರೆ ನಮ್ಮಲ್ಲಿರುವ ವಿದ್ಯಾರ್ಥಿಗಳ ಸಂಖ್ಯೆಗೆ ಹೋಲಿಕೆ ಮಾಡಿದರೆ ಈಗಿರುವ ವಿಶ್ವವಿದ್ಯಾಲಯಗಳ ಸಂಖ್ಯೆ ಕಡಿಮೆ ಇದೆ. ವಿದ್ಯಾರ್ಥಿಗಳ ಅಂಕಪಟ್ಟಿ, ಪ್ರಮಾಣ ಪತ್ರ, ಹಾಗೂ ಇನ್ನಿತರ ಸಮಸ್ಯೆಗಳ ಪರಿಹಾರಕ್ಕೆ ಸುಮಾರು ೨೦೦ ಕಿ.ಮೀ. ವಿದ್ಯಾರ್ಥಿಗಳು ಪ್ರಯಾಣ ಮಾಡಬೇಕು. ಇಂತಹ ಸಮಸ್ಯೆ ಪರಿಹಾರಕ್ಕೆ ಹೊಸ ವಿ.ವಿ.ಗಳು ಸಹಕಾರಿಯಾಗಬೇಕು ಎಂದು ಒತ್ತಾಯಿಸಿದರು.
ಯಾವುದೇ ಸರ್ಕಾರಗಳು ಘೋ?ಣೆ ಮಾಡಿದ ವಿಶ್ವವಿದ್ಯಾಲಯಗಳನ್ನು ಅಭಿವೃದ್ಧಿಪಡಿಸಬೇಕೇ ಹೊರತು ಅತಂತ್ರಗೊಳಿಸಬಾರದು. ರಾಜ್ಯದಲ್ಲಿ ಆಳ್ವಿಕೆ ಮಾಡುತ್ತಿರುವ ರಾಜ್ಯ ಸರ್ಕಾರ ಎರಡು ವ? ಕಳೆದರೂ ಸಹಿತ ವಿಶ್ವವಿದ್ಯಾಲಯಗಳ ಅಭಿವೃದ್ಧಿಗೆ ಕಿಂಚಿತ್ತೂ ಗಮನ ಕೊಟ್ಟಿಲ್ಲ. ಈಗ ಮೂಲಭೂತ ಸೌಲಭ್ಯಗಳ ನೆಪವೊಡ್ಡಿ ಮುಚ್ಚುತ್ತಿರುವುದನ್ನು ನೋಡಿದರೆ ಸರ್ಕಾರ ವಿದ್ಯಾರ್ಥಿ ವಿರೋಧಿ, ಶಿಕ್ಷಣ ವಿರೋಧಿ ನೀತಿಯನ್ನು ಅನುಸರಿಸುತ್ತಿರುವುದು ಸ್ಪ?ವಾಗಿ ಕಾಣುತ್ತಿದೆ ಎಂದು ಆಪಾದಿಸಿದರು.
ರಾಜ್ಯ ಸರ್ಕಾರ ಕೂಡಲೇ ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರವನ್ನು ಕೈಬಿಡಬೇಕು. ವಿಶ್ವವಿದ್ಯಾಲಯಗಳ ಮೂಲಭೂತ ಸೌಲಭ್ಯಗಳಿಗೆ ಅಗತ್ಯ ಅನುದಾನ ನೀಡಬೇಕು. ವಿಶ್ವವಿದ್ಯಾಲಯಗಳ ಉನ್ನತೀಕರಣಕ್ಕಾಗಿ ಅನುದಾನ ನೀಡಬೇಕೆಂದು ಎಬಿವಿಪಿ ಪದಾಧಿಕಾರಿಗಳು ಆಗ್ರಹಿಸಿದರು.
ಎಬಿವಿಪಿ ಜಿಲ್ಲಾ ಸಂಚಾಲಕ ಕನಕರಾಜ್ ಕೋಡಿಹಳ್ಳಿ, ಜಿಲ್ಲಾ ಸಹ ಸಂಚಾಲಕ ಜೆ.ಎಸ್.ತಿಪ್ಪೇಶ್, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಪ್ರೀತಮ್, ಚಂದ್ರಕಲಾ, ಮನೋಜ್, ಮಹೇಶ್, ಗೌರಿಶಂಕರ್, ಮನು ಮತ್ತು ಎಬಿವಿಬಿ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!