Wednesday, August 10, 2022

Latest Posts

ವೈದ್ಯಕೀಯ ಸೀಟ್‌ಗಳ ಬ್ಲಾಕಿಂಗ್ ದಂಧೆ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಹೊಸ ದಿಗಂತ ವರದಿ, ಮಂಗಳೂರು:

ವೈದ್ಯಕೀಯ ಸೀಟ್‌ಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿದವರ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ
ಪರಿಷತ್ ಕಾರ್ಯಕರ್ತರು ನಗರದ ಮಿನಿ ವಿಧಾನ ಸೌಧದ ಎದುರು ಶನಿವಾರ ಪ್ರತಿಭಟನೆ ನಡೆಸಿದರು.
ಈ ಸಂದರ್ಭ ಮಾತನಾಡಿದ ನಗರ ಸಂಘಟನಾ ಕಾರ್ಯದರ್ಶಿ ಅಜಯ್ ಪ್ರಭು, ಬಡ ಮತ್ತು ಪ್ರತಿಭಾವಂತ ಮಕ್ಕಳಿಗೆ ನ್ಯಾಯವಾಗಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೀಟ್‌ಗಳು ದೊರೆಯಲಿ ಎಂಬ ಉದ್ದೇಶದಿಂದ ಸಿಇಟಿ ಪರೀಕ್ಷೆಗಳನ್ನು ಜಾರಿ ಮಾಡಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಜ್ಯದೆಲ್ಲೆಡೆ ಹೋರಾಟ ನಡೆಸಲಾಗಿತ್ತು. ಅದರ ಪರಿಣಾಮ ರಾಜ್ಯದಲ್ಲಿ ಸಿಇಟಿ ಪರೀಕ್ಷೆ ಜಾರಿಗೊಂಡಿತು. ಆದರೆ ಇದೀಗ ರಾಜ್ಯದ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳ ಮೆಡಿಕಲ್ ಸಿಟ್ ಬ್ಲಾಕಿಂಗ್ ದಂಧೆಯನ್ನು ಸಾಕ್ಷಿ ಸಮೇತವಾಗಿ ಐಟಿ ಅಧಿಕಾರಿಗಳು ಬಯಲಿಗೆ ಎಳೆದಿದ್ದಾರೆ. ಸೀಟ್‌ಗಳ ಮಾರಾಟದಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವ ಜತೆಗೆ ಆದಾಯ ತೆರಿಗೆ ಇಲಾಖೆಯ ಕಾಯ್ದೆಯೂ ಕೂಡ ಇಲ್ಲಿ ಉಲ್ಲಂಘನೆ ಆಗಿದೆ ಎಂದರು.
ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿದವರ ವಿರುದ್ದ ಸರಕಾರ ಯಾವುದೇ ಒತ್ತಡಗಳಿಗೆ ಮಣಿಯದೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಮಣಿಕಂಠ ಕಳಸ , ನಗರ ಕಾರ್ಯದರ್ಶಿ ಶ್ರೆಯಸ್ ಶೆಟ್ಟಿ, ರಾಷ್ಟ್ರೀಯ ಕಾರ್‍ಯಕಾರಿಣಿ ಸದಸ್ಯೆ ದೀಪ್ತಿ , ನಗರ ಸಹಕಾರ್ಯದರ್ಶಿ ಕಿರಣ್, ನಗರ ವಿದ್ಯಾರ್ಥಿನಿ ಪ್ರಮುಖ್ ಶ್ರೀಲಕ್ಷ್ಮಿ , ಹೋರಾಟ ಪ್ರಮುಖ್ ಪ್ರಣಮ್, ಕಾರ್ಯಾಲಯ ಕಾರ್ಯದರ್ಶಿ ಆದಿತ್ಯ ಶೆಟ್ಟಿ, ಪ್ರಮುಖರಾದ ಚೇತನ್, ವಿಖ್ಯಾತ್, ಆದರ್ಶ್, ಧರಣಿಶ್, ಭವನೀಶ್ ಶೆಟ್ಟಿ, ವರುಣ್, ಕೀರ್ತನ್, ಸುಶಾಂತ್, ಸಂತೋಷ್ ಬರ್ಕೆ, ಶ್ರಾವ್ಯ, ಕುಶಾಲ್ , ಹರ್ಷಿತ್ ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss