Monday, September 8, 2025

ಎಸಿ ಸ್ಫೋಟ: ಒಂದೇ ಕುಟುಂಬದ ಮೂವರು ಸಾವು, ಓರ್ವನ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹರಿಯಾಣದ ಫರಿದಾಬಾದ್‌ನಲ್ಲಿ ಇಂದು ಬೆಳಗಿನ ಜಾವ 1:30ರ ಸುಮಾರಿಗೆ ಕಟ್ಟಡದೊಳಗೆ ಏಸಿಯ ಕಂಪ್ರೆಸರ್ ಸ್ಪೋಟಗೊಂಡು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತರನ್ನು ಸಚಿನ್ ಕಪೂರ್, ಅವರ ಪತ್ನಿ ರಿಂಕು ಕಪೂರ್ ಹಾಗೂ ಮಗಳು ಸುಜನ್ ಕಪೂರ್ ಎಂದು ಗುರುತಿಸಲಾಗಿದೆ. ಈ ಸ್ಫೋಟದಲ್ಲಿ ಅವರ ಸಾಕು ನಾಯಿ ಸಹ ಜೀವ ಕಳೆದುಕೊಂಡಿದೆ.

ನಾಲ್ಕು ಅಂತಸ್ತಿನ ಕಟ್ಟಡದ ಎರಡನೇ ಮಹಡಿಯಲ್ಲಿ ವಾಸಿಸುತ್ತಿದ್ದ ಕುಟುಂಬ ದಟ್ಟ ಹೊಗೆಯಿಂದ ಉಸಿರುಗಟ್ಟಿ ಸಾವಿಗೀಡಾಗಿದೆ. ಕಿಟಕಿಯಿಂದ ಹಾರುವ ಮೂಲಕ ಜೀವ ಉಳಿಸಿಕೊಳ್ಳಲು ಯತ್ನಿಸಿದ ಸಚಿನ್ ಅವರ ಮಗ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಸ್ಥಿತಿ ಚಿಂತಾಜನಕವಾಗಿದೆ.

ಸ್ಫೋಟದ ಭಾರೀ ಶಬ್ಧ ಕೇಳುತ್ತಿದ್ದಂತೆಯೇ ಅಕ್ಕಪಕ್ಕದವರು ಎಚ್ಚರಗೊಂಡು ಕಟ್ಟಡದೊಳಗೆ ನುಗ್ಗಿ ಉಳಿದವರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಅವರ ತಕ್ಷಣದ ಸಹಕಾರದಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.

ಆ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಏಳು ಜನರು ವಾಸಿಸುತ್ತಿದ್ದು, ಅವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಇದಲ್ಲದೇ, ಮೊದಲನೇ ಮಹಡಿಯಲ್ಲಿ ಸಚಿನ್ ಕಪೂರ್ ಕಚೇರಿಯನ್ನು ನಡೆಸುತ್ತಿದ್ದರು. ಅಲ್ಲಿ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿ