ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಾತ್ರಿ ಮಲಗಿದ್ದಾಗ ಮನೆಗೆ ಬೆಂಕಿ ತಗುಲಿ ಗ್ರಾಮ ಪಂಚಾಯತಿ ಸದಸ್ಯರೊಬ್ಬರು ಸಜೀವ ದಹನವಾಗಿದ್ದಾರೆ.
ಈ ದುರ್ಘಟನೆ ನಿನ್ನೆ ತಡರಾತ್ರಿ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಡೆದಿದೆ.
ಶಿರಗುಪ್ಪಿ ಗ್ರಾಮ ಪಂಚಾಯಿತಿ ಸದಸ್ಯ ಸೋಮಶೇಖರ್ ಶಿವಾನಂದ ಪಾಟೀಲ್(32) ಮೃತರು.
ರಾತ್ರಿ ಇವರೊಬ್ಬರೇ ಮನೆಯಲ್ಲಿ ಮಲಗಿದ್ದಾಗ ಈ ಘಟನೆ ಸಂಭವಿಸಿದೆ. ಎಸಿ ಶಾರ್ಟ್ ಸರ್ಕ್ಯೂಟ್ ಆಗಿ ಇಡೀ ಮನೆಗೆ ಬೆಂಕಿ ಹತ್ತಿಕೊಂಡು, ಸೋಮಶೇಖರ್ ಸಜೀವ ದಹನವಾಗಿದ್ದಾರೆ.
ಈ ಕುರಿತು ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.