March 3, 2026
Tuesday, March 3, 2026
spot_img

ಶೈಕ್ಷಣಿಕ ಒತ್ತಡವೋ? ವೈಯಕ್ತಿಕ ನೋವೋ?: ಕಾಲೇಜು ವಿದ್ಯಾರ್ಥಿನಿ ಪಿಜಿಯಲ್ಲಿ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಹೊರವಲಯದ ಹೆಸರಘಟ್ಟ ರಸ್ತೆಯ ಖಾಸಗಿ ಕಾಲೇಜಿನಲ್ಲಿ ಬಿ ಫಾರ್ಮ್ ಫೈನಲ್ ಇಯರ್ ಓದುತ್ತಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದುರದೃಷ್ಟಕರ ಘಟನೆ ಇಂದು ನಡೆದಿದೆ.

ಮೃತರನ್ನು ಹಾಸನ ಮೂಲದ ವತ್ಸಲ (19) ಎಂದು ಗುರುತಿಸಲಾಗಿದೆ. ಈಕೆ ಕಾಲೇಜಿನ ಸಮೀಪದ ಹೆಣ್ಣುಮಕ್ಕಳ ಪಿಜಿಯೊಂದರಲ್ಲಿ ವಾಸಿಸುತ್ತಿದ್ದಳು. ಪಿಜಿಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ವತ್ಸಲ ಪತ್ತೆಯಾಗಿದ್ದಾಳೆ.

ವಿದ್ಯಾರ್ಥಿನಿಯ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ಮಾಹಿತಿ ತಿಳಿದ ಕೂಡಲೇ ಸೋಲದೇವನಹಳ್ಳಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ವತ್ಸಲ ಅವರ ಆಪ್ತ ಸ್ನೇಹಿತರು ಮತ್ತು ಅವರ ಮೊಬೈಲ್ ಫೋನ್ ಅನ್ನು ಪರಿಶೀಲಿಸುತ್ತಿದ್ದು, ಸಾವಿಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.

ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !