ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಗದಗ :
ಸ್ಥಳೀಯ ನಗರಸಭೆಯ ಲೋಕೋಪಯೋಗಿ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಗುತ್ತಿಗೆದಾರನಿಂದ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬಲೆಗೆ ಕೆಡವಿದ್ದಾರೆ.
ಬುಧವಾರ ಸಂಜೆ ನಗರಸಭೆಯಲ್ಲಿ ಗುತ್ತಿಗೆದಾರ ಅಬ್ದುಲ್ ಮನಿಯಾರ್ ಎಂಬುವರಿಂದ 25 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಹಾಯಕ ಅಭಿಯಂತರ ವರ್ಧಮಾನ ಹುದ್ದಾರ ಎಂಬವರನ್ನು ಎಸಿಬಿ ಅಧಿಕಾರಿ ಬಂದಿಸಿ ಕಡತಗಳನ್ನು ಪರೀಶೀಲಿಸಿದರು.
ಎಸಿಬಿ ಡಿವೈಎಸ್ಪಿ ವೇಣುಗೋಪಾಲ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಇನ್ಸಪೆಕ್ಟರ್ ಆರ್.ಎಫ್.ದೇಸಾಯಿ, ವಿರೇಶ್ ಹಳ್ಳಿ ಸೇರಿದಂತೆ 10 ಕ್ಕೂ ಹೆಚ್ಚು ಸಿಬ್ಬಂದಿಗಳು ಪರಿಶೀಲನೆ ನಡೆಸಿದರು.