ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………….
ಹೊಸದಿಗಂತ ವರದಿ, ಉಡುಪಿ:
ರಾಜ್ಯದ ವಿವಿಧೆಡೆಗಳಲ್ಲಿ ಬೆಳ್ಳಂಬೆಳಗ್ಗೆ ನಡೆದ ಎಸಿಬಿ ದಾಳಿ ಉಡುಪಿಯಲ್ಲಿಯೂ ಮುಂದುವರಿದಿದೆ. ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಕಾರ್ಯನಿರ್ವಾಹಕ ಇಂಜಿನಿಯರ್
ಕೃಷ್ಣ ಎಸ್. ಹೆಬ್ಸೂರು ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಉಡುಪಿ ನಗರದ ದೊಡ್ಡಣ ಗುಡ್ಡೆಯಲ್ಲಿರುವ ಕೃಷ್ಣ ಹೆಬ್ಸೂರು ಮನೆ ‘ಗೋಕುಲ್’ ನಿವಾಸ ಮೇಲೆ ದಾಳಿ ನಡೆದಿದೆ. ಎಸಿಬಿ ಅಧಿಕಾರಿಗಳು ದಾಖಲೆ ಹಾಗೂ ಆಸ್ತಿಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ.