Thursday, August 11, 2022

Latest Posts

ಎಲೆಕ್ಟ್ರಿಕಲ್ ಇನ್ಸ್ ಪೆಕ್ಟರ್ ವಿಜಯಕುಮಾರ್ ನಿವಾಸದ ಮೇಲೆ ಎಸಿಬಿ ದಾಳಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………….

ಹೊಸ ದಿಗಂತ ವರದಿ, ಬಳ್ಳಾರಿ:

ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಇಲ್ಲಿನ ಅಹಂಬಾವಿ‌ ಪ್ರದೇಶದ ಎಲೆಕ್ಟ್ರಿಕಲ್ ಇನ್ಸ್ ಪೆಕ್ಟರ್ ಎ.ಎನ್.ವಿಜಯಕುಮಾರ್ ಎನ್ನುವವರ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ಗುರುವಾರ ಬೆಳ್ಳಂ ಬೆಳಿಗ್ಗೆ ದಾಳಿ ನಡಸಿದ್ದಾರೆ. ಎಸಿಬಿ ಡಿವೈಎಸ್ಪಿ ಸೂರ್ಯನಾರಾಯಣ ಅವರ ನೇತೃತ್ವದ ತಂಡ ಬೆಳ್ಳಂ ಬೆಳಿಗ್ಗೆ ಏಕಾ ಏಕಿ ದಾಳಿ ನಡೆಸಿ ಅಧಿಕಾರಿಗಳಿಗೆ ಬಿಸಿ‌ ಮುಟ್ಟಿಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆ ಅಧಿಕಾರಿಗಳು ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ಬೆಳಿಗ್ಗೆಯಿಂದ ನಿವಾಸದಲ್ಲಿನ ಕಡತಗಳ ಪರಿಶೀಲನೆ ಮುಂದುವರೆದಿದೆ‌. ಬಳ್ಳಾರಿಯ ಅಹಂಬಾವಿ ಪ್ರದೇಶದ ಮನೆ, ಬಸವೇಶ್ವರ ಬಡಾವಣೆಯ ನಿವಾಸ, ಕಪ್ಪಗಲ್ ರಸ್ತೆಯ ಕಚೇರಿ ಹಾಗೂ ಬೆಂಗಳೂರು ನಗರದ ನಿವಾಸ ಸೇರಿ ಗುರುವಾರ ಏಕಕಾಲಕ್ಕೆ ಐದು ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿ, ಬಿಸಿ‌ ಮುಟ್ಟಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss