ಹೊಸನಗರ ವರದಿ, ಬಾಗಲಕೋಟೆ
ಬಾದಾಮಿ ವಲಯ ಅರಣ್ಯಾಧಿಕಾರಿ ಪಿ.ಎಸ್.ಖೇಡಗಿ ಅವರ ಮನೆ ಮೇಲೆ ಇಂದು ಬೆಳಗ್ಗೆ ಎಸಿಬಿ ಅಧಿಕಾರಿಗಳ ದಾಳಿ ನಡೆದಿದೆ.
ಬಾಗಲಕೋಟೆಯ ನವನಗರದ ಸೆಕ್ಟರ್ ನಂ 15 ರಲ್ಲಿರುವ ಮನೆ, ಸಂಬಂಧಿಕರ ಮನೆಗಳು, ಅಂಗಡಿ ಸೇರಿದಂತೆ ಒಟ್ಟು ಐದು ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಅರಣ್ಯಾಧಿಕಾರಿ ಮನೆಯಲ್ಲಿ ಶ್ರೀಗಂಧದ ತುಂಡುಗಳು ಪತ್ತೆಯಾಗಿವೆ. ಖೇಡಗಿ ಅವರ ಬ್ಯಾಂಕ್ ಖಾತೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಲೋಕಾಯುಕ್ತರ ಎಸ್ಪಿ ನೇಮಗೌಡ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಸುರೇಶ್ ರಡ್ಡಿ ನೇತೃತ್ವದಲ್ಲಿ ನಡೆದಿರುವ ದಾಳಿಯಲ್ಲಿ 15ಕ್ಕೂ ಹೆಚ್ಚಿನ ಸಿಬ್ಬಂದಿ ಪಾಲ್ಗೊಂಡಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ