Sunday, August 14, 2022

Latest Posts

ಉಪಮುಖ್ಯ ವಿದ್ಯುತ್ ಪರಿವೀಕ್ಷಕನ ಮನೆ ಮೇಲೆ ಎಸಿಬಿ ದಾಳಿ: ಬೆಳಗಾವಿ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ರೇಡ್

ಹೊಸದಿಗಂತ ವರದಿ, ಬೆಳಗಾವಿ:

ಮಂಗಳವಾರ ಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಏಕಕಾಲಕ್ಕೆ ಜಿಲ್ಲೆಯ ನಾಲ್ಕು ಕಡೆ ದಾಳಿ ನಡೆಸಿದ್ದಾರೆ.

ಉಪಮುಖ್ಯ ವಿದ್ಯುತ್ ಪರಿವೀಕ್ಷಕ ಹನುಮಂತ ಚಿಕ್ಕಣ್ಣನವರ್ ಮನೆ ಮೇಲೆ ದಾಳಿ ಮಾಡಿದ್ದಾರೆ.

ಬೆಳಗಾವಿಯ ಚನ್ನಮ್ಮ ನಗರದಲ್ಲಿರುವ ಹನುಮಂತ ಚಿಕ್ಕಣ್ಣನವರ್ ನಿವಾಸ, ಉಪಮುಖ್ಯ ವಿದ್ಯುತ್ ಪರಿವೀಕ್ಷಕರ ಕಚೇರಿ, ಚನ್ನಮ್ಮ ನಗರದಲ್ಲಿ ಮಗನ ಹೆಸರಿನಲ್ಲಿರುವ ಶಾಂತಿನಾಥ ಹೋಮ್ಸ್ ಅಪಾರ್ಟ್‌ಮೆಂಟ್ ‌ಮತ್ತು ಗೋಲಭಾಂವಿ ಗ್ರಾಮದ ತೋಟದ ಮನೆಯ ಮೇಲೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಳಗಾವಿ ಉತ್ತರ ವಲಯದ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲಾತಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ .

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss