ತೆಲಂಗಾಣದ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: 100 ಕೋಟಿಗೂ ಅಧಿಕ ಆಸ್ತಿ ಪತ್ತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೆಲಂಗಾಣದ ರಾಜ್ಯ ರಿಯಲ್ ಎಸ್ಟೇಟ್ ನಿಯಂತ್ರಣ ಪೃಆಧಿಕಾರದ ಕಾರ್ಯದರ್ಶಿ ಶಿವ ಬಾಲಕೃಷ್ಣ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಾಳಿ ನಡೆಸಿದ್ದು, 100 ಕೋಟಿಗೂ ಅಧಿಕ ಮೊತ್ತದ ಆಸ್ತಿ ಪತ್ತೆ ಮಾಡಿದೆ.

ಹಲವಾರು ರಿಯಲ್ ಎಸ್ಟೇಟ್ ಕಂಪನಿಗಳಿಗೆ ಪರ್ಮಿಷನ್ ನೀಡಲು ಕೋಟಿ ಕೋಟಿ ಪಡೆಯುತ್ತಿದ್ದಾರೆ ಎನ್ನುವ ಆರೋಪ ಎದುರಾಗಿದೆ. ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಇದೆ ಎನ್ನುವ ಆರೋಪದ ಮೇಲೆ ಕಚೇರಿ ಹಾಗೂ ಮನೆ ಮೇಲೆ ದಾಳಿ ನಡೆದಿದೆ.

ಇದರ ಜೊತೆಗೆ 40 ಲಕ್ಷ ಕ್ಯಾಶ್, ಎರಡು ಕೆಜಿ ಚಿನ್ನ ಹಾಗೂ 60ದುಬಾರಿ ವಾಚ್, 14 ಫೋನ್ ಹಾಗೂ 10 ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!