ಹೊಸದಿಗಂತ ವರದಿ, ಮಂಗಳೂರು:
ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಲಿಂಗೇಗೌಡ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ಮಂಗಳೂರಿನ ಉರ್ವದ ಲಿಂಗೇಗೌಡ ಅವರ ಮನೆಗೆ ಏಳು ಮಂದಿ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ರಾಜ್ಯಾದ್ಯಂತ ಹಲವೆಡೆ ಇಂದು ಎಸಿಬಿ ದಾಳಿ ನಡೆದಿದ್ದು ಮಂಗಳೂರಿನಲ್ಲೂ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಕಳೆದ ಹಲವು ವರ್ಷಗಳಿಂದ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಇಂಜಿನಿಯರ್ ಆಗಿದ್ದ ಲಿಂಗೇಗೌಡ ಅವರು ಪ್ರಸ್ತುತ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.