Tuesday, August 16, 2022

Latest Posts

ಮಂಗಳೂರು| ನಗರಾಭಿವೃದ್ಧಿ ಘಟಕದ ಎಕ್ಸಿಕ್ಯೂಟಿವ್ ಇಂಜಿನಿಯರ್ ಮನೆಗೆ ಎಸಿಬಿ ರೈಡ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………….

ಹೊಸ ದಿಗಂತ ವರದಿ ಮಂಗಳೂರು:

ರಾಜ್ಯದ 9 ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ, ಕಚೇರಿಗೆ ಎಸಿಬಿ ಅಧಿಕಾರಿಗಳ ತಂಡ ಗುರುವಾರ ಮುಂಜಾನೆ ದಾಳಿ‌ ನಡೆಸಿದ್ದು, ಮಂಗಳೂರಿನಲ್ಲೂ ಇಂಜಿನಿಯರ್ ಒಬ್ಬರ ಮನೆಗೆ ದಾಳಿಯಾಗಿದೆ.
ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿನ ಜಿಲ್ಲಾ ನಗರಾಭಿವೃದ್ಧಿ ಘಟಕದ ಎಕ್ಸಿಕ್ಯೂಟಿವ್ ಇಂಜಿನಿಯರ್ ಶ್ರೀಧರ್ ಅವರ ಮನೆ ಹಾಗೂ ಕಚೇರಿಗೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಮಂಗಳೂರಿನಲ್ಲಿ ಶ್ರೀಧರ್ ಅವರಿಗೆ ಸೇರಿದ ಮನೆ ಹಾಗೂ ಜಿಲ್ಲಾಧಿಕಾರಿ ಕಚೇರಿಯ ನಗರಾಭಿವೃದ್ಧಿ ಘಟಕಕ್ಕೆ ದಾಳಿ‌ ನಡೆಸಿದ ಅಧಿಕಾರಿಗಳು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಎಸಿಬಿ ಅಧಿಕಾರಿಗಳು ಶ್ರೀಧರ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಎಸಿಬಿ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss