ಕೊಪ್ಪಳ ಗುಪ್ತಚರ ಇಲಾಖೆ ಅಧಿಕಾರಿಗೆ ಎಸಿಬಿ ಶಾಕ್‌: 4 ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ

ಹೊಸದಿಗಂತ ವರದಿ, ಕೊಪ್ಪಳ:
ಗಂಗಾವತಿ ಗ್ರಾಮೀಣ ವೃತ್ತದ ಪೊಲೀಸ್ ಅಧಿಕಾರಿಯಾಗಿದ್ದ, ಈಗ ಪ್ರಸ್ತುತ ಪೊಲೀಸ್ ಗುಪ್ತಚರ ಇಲಾಖೆ ಅಧಿಕಾರಿಯಾಗಿರುವ ಉದಯರವಿ ಅವರ ಮನೆ ಸೇರಿದಂತೆ ವಿವಿಧೆಡೆ ಇರುವ 4 ಮನೆಗಳ ಮೇಲೆ ಇಂದು ಬೆಳ್ಳಂ ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಉದಯರವಿ ಅವರು ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪಿಐ ಆಗಿ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗಷ್ಟೇ ಬೆಂಗಳೂರಿಗೆ ಪೊಲೀಸ್ ಗುಪ್ತಚರ ಇಲಾಖೆಯ ಇನ್ಸ್‌ ಪೆಕ್ಟರ್ ಆಗಿ ವರ್ಗಾವಣೆಗೊಂಡಿದ್ದರು. ಕೆಲ ಜನಪ್ರತಿನಿಧಿಗಳು ಮತ್ತು ಉದಯರವಿ ಅವರ ಮಧ್ಯೆ ಶೀತಲ ಸಮರದ ಹಿನ್ನೆಲೆಯಲ್ಲಿ ಇತ್ತೀಚೆಗೆ ಕೊಪ್ಪಳಕ್ಕೆ ಭೇಟಿ ನೀಡಿದ್ದ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿಯ ಕೆಲ ಮುಖಂಡರು ದೂರು ಸಲ್ಲಿಸಿ ತನಿಖೆ ನಡೆಸಿ ಮತ್ತು ವರ್ಗಾವಣೆಗೊಳಿಸುವಂತೆ ಒತ್ತಾಯಿಸಿದ್ದರು.
ಒಟ್ಟು 4 ಕಡೆ ಎಸಿಬಿ ಪೊಲೀಸರು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!