Monday, August 15, 2022

Latest Posts

ಬೆಳ್ಳಂಬೆಳಗ್ಗೆ ಎಸಿಬಿ ಶಾಕ್: ರಾಜ್ಯಾದ್ಯಂತ 9 ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ 40 ಕಡೆ ದಾಳಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………….

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆ ರಾಜ್ಯದ 9 ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಎಸಿಬಿ ಶಾಕ್ ನೀಡಿದೆ. 300ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು 40 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಅಕ್ರಮ ಸಂಪತ್ತು, ವಿವಿಧ ಕಡೆಗಳಲ್ಲಿ ಭೂಮಿ, ಮನೆ ಹೊಂದಿರುವ ಮಾಹಿತಿ  ಹಿನ್ನೆಲೆ ಶಿವಮೊಗ್ಗ, ಬೆಂಗಳೂರು, ಮಂಗಳೂರು ದಾವಣಗೆರೆ, ಉಡುಪಿ, ಬಳ್ಳಾರಿ, ಚಿತ್ರದುರ್ಗ, ಮಂಡ್ಯ ಇತ್ಯಾದಿ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಯಾವೆಲ್ಲ ಅಧಿಕಾರಿಗ ನಿವಾಸದ ಮೇಲೆ ಎಸಿಬಿ ದಾಳಿ ನಡೆದಿದೆ?

1) ಜಿ. ಶ್ರೀಧರ್, ಇಇ ಜಿಲ್ಲಾ ನಗರಾಭಿವೃದ್ಧಿ ಕೋಶ ಡಿಸಿ ಕಚೇರಿ, ಮಂಗಳೂರು
2) ಕೃಷ್ಣ .ಎಸ್. ಹೆಬ್ಸರ್, ಇಇ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಲಿಮಿಟೆಡ್, ಉಡುಪಿ
3) ಆರ್ ಪಿ ಕುಲಕರ್ಣಿ, ಸಿಇ- ಕೆಆರ್‍ಡಿಸಿಎಲ್
4) ಎಚ್ ಆರ್ ಕೃಷ್ಣಪ್ಪ, ಸಹಾಯಕ ನಿರ್ದೇಶಕ ಮಲ್ಲೂರು ನಗರ ಯೋಜನಾ ಪ್ರಾಧಿಕಾರ, ಕೋಲಾರ
5) ಸುರೇಶ್ ಮೊಹ್ರೆ, ಜೆಇ ಪಿಆರ್‌ಇ, ಬೀದರ್
6) ವೆಂಕಟೇಶ್ ಟಿ, ಡಿಸಿಎಫ್ ಸಾಮಾಜಿಕ ಅರಣ್ಯ, ಮಂಡ್ಯ
7) ಸಿದ್ದರಾಮ ಮಲ್ಲಿಕಾರ್ಜುನ್ ಬಿರಾದಾರ, ಎಇಇ ಹೆಸ್ಕಾಮ್, ವಿಜಯಪುರ
8) ಕೃಷ್ಣಮೂರ್ತಿ, ಹಿರಿಯ ಮೋಟಾರು ವಾಹನ ನಿರೀಕ್ಷಕ, ಕೋರಮಂಗಲ
9) ಎ ಎನ್ ವಿಜಯ್ ಕುಮಾರ್, ಎಲೆಕ್ಟ್ರಿಕಲ್ ಇನ್ಸ್ಪೆಕ್ಟರ್, ಬಳ್ಳಾರಿ

ಕೋಲಾರ ಜಿಲ್ಲೆ ಮಾಲೂರು ನಗರಸಭೆ ಯೋಜನಾ ನಿರ್ದೇಶಕ ಹೆಚ್. ಆರ್. ಕೃಷ್ಣಪ್ಪ ಅವರ ಮನೆ, ಕಚೇರಿಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ, ಆಸ್ತಿಪತ್ರಗಳ ಪರಿಶೀಲನೆ ನಡೆಸಿದ್ದಾರೆ. ಹೆಚ್. ಆರ್. ಕೃಷ್ಣಪ್ಪನವರ ಸ್ವಗ್ರಾಮ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ದೇವರಹಳ್ಳಿಯ ಮನೆ, ಕೋಲಾರ ಜಿಲ್ಲೆಯ ಮಾಲೂರಿನ ಮನೆ, ಬೆಂಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿರುವ ಮನೆ ಮತ್ತು ಕಚೇರಿ ಸೇರಿ 5 ಕಡೆಗಳಲ್ಲಿ ಏಕಕಾಲಕ್ಕೆ ಎಸಿಬಿ ಅಧಿಕಾರಿಗಳ ದಾಳಿ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss