ಶಾಸಕ ಜಮೀರ್ ಗೆ ಎಸಿಬಿ ಶಾಕ್: ಮನೆ, ಕಚೇರಿಗಳಿಗೆ ಬಿತ್ತು ರೇಡ್, ದಾಖಲೆ ಪರಿಶೀಲನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ಜಮೀರ್ ಅಹಮದ್ ಖಾನ್ ಮನೆ ಮೇಲೆ ಎಸಿಬಿ ದಿಢೀರ್ ದಾಳಿ ನಡೆಸಿದೆ.
ಪ್ರಕರಣಕ್ಕೆ‌ಸಂಬಂಧಿಸಿ ಭ್ರಷ್ಟಾಚಾರ ನಿಗ್ರದ ದಳ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಬಂಬೂ ಬಜಾರ್ ನಲ್ಲಿರುವ ಮನೆ, ಕಲಾಸಿಪಾಳ್ಯದಲ್ಲಿ ಇರುವ ನ್ಯಾಷನಲ್ ಟ್ರಾವೆಲ್ಸ್‌ ಕಚೇರಿ, ಸಿಲ್ವರ್‌ ಓಕ್‌ ವಸತಿ ಸಮುಚ್ಚಯದಲ್ಲಿರುವ ಫ್ಲಾಟ್‌, ಸದಾಶಿವನಗರದಲ್ಲಿರುವ ಗೆಸ್ಟ್‌ಹೌಸ್‌ ಮತ್ತು ಬನಶಂಕರಿಯಲ್ಲಿರುವ ಜಿ.ಕೆ ಅಸೋಸಿಯೇಟ್ಸ್‌ ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. 40 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳ ತಂಡ ತನಿಖೆಯಲ್ಲಿ ಸಕ್ರೀಯವಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಶಾಸಕ ಜಮೀರ್ ಅಹ್ಮದ್ ಒಡೆತನದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಹಾಗೂ ಅವರ ನಿವಾಸದ ಮುಂದೆ ಸ್ಥಳೀಯ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!