ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ಹೊಸದಿಗಂತ ವರದಿ, ಕೊಪ್ಪಳ:

ಜಮೀನಿನ ಪಹಣಿ ತಿದ್ದುಪಡಿ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿ ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ.
ಕವಲೂರು ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಕರಿಯಪ್ಪ ಎಂ. ಹುಬ್ಬಳ್ಳಿ ಬುಧವಾರ ಕೊಪ್ಪಳ ನಗರದ ಸಿಂಪಿ ಲಿಂಗಣ್ಣ ರಸ್ತೆಯ ಟ್ರಿನಿಟಿ ಶಾಲೆಯ ಹತ್ತಿರದ ಎದುರು ಇರುವ ಕೊಠಡಿಯೊಂದರಲ್ಲಿ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕವಲೂರು ಗ್ರಾಮದ ಶಿವಪ್ಪ ಬೇವೂರು ತಮ್ಮ ತಂದೆಯ ಹೆಸರಿನಲ್ಲಿದ್ದ ಪಹಣಿ ಪತ್ರ ತಿದ್ದುಪಡಿ ಮಾಡಿಕೊಡುವಂತೆ ಕೊಪ್ಪಳ ತಹಶೀಲ್ದಾರ್‌ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಈ ಕೆಲಸ ಮಾಡಿಕೊಡಲು 5 ಸಾವಿರ ಕೊಡಬೇಕು ಎಂದು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕರಿಯಪ್ಪ ಮುಂಗಡವಾಗಿ 1 ಸಾವಿರ ರೂ. ಪಡೆದುಕೊಂಡಿದ್ದರು. ಬಾಕಿ ಉಳಿದ 4 ಸಾವಿರ ರೂ. ನೀಡುವಂತೆ ಒತ್ತಾಯಿಸುತ್ತಿದ್ದರು. ಇದರಿಂದ ಬೇಸತ್ತ ಶಿವಪ್ಪ ಜು. 19ರಂದು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!