April 10, 2026
Friday, April 10, 2026
spot_img

ಯುದ್ಧ ನಿಲ್ಲಿಸೋಕೆ ಮೂರೇ ಷರತ್ತು, ಒಪ್ಪಿಕೊಳ್ಳಿ: ಅಮೆರಿಕ, ಇಸ್ರೇಲ್‌ಗೆ ಇರಾನ್ ಸಂದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯದಲ್ಲಿ ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರವಾಗಿರುವ ನಡುವೆಯೇ ಯುದ್ಧ ಅಂತ್ಯಗೊಳ್ಳುವ ಬಗ್ಗೆ ಹೊಸ ಬೆಳವಣಿಗೆ ಎದುರಾಗಿದೆ. ದಾಳಿಗಳನ್ನು ನಿಲ್ಲಿಸಲು ಮೂರು ಪ್ರಮುಖ ಷರತ್ತುಗಳನ್ನು ಒಪ್ಪಿಕೊಳ್ಳಬೇಕು ಎಂದು ಇರಾನ್ ಸ್ಪಷ್ಟಪಡಿಸಿದೆ.

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ತಮ್ಮ ಹೇಳಿಕೆಯಲ್ಲಿ, ದೇಶದ ಕಾನೂನುಬದ್ಧ ಹಕ್ಕುಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಬೇಕು ಎಂದು ಹೇಳಿದ್ದಾರೆ. ಜೊತೆಗೆ ಇತ್ತೀಚಿನ ಸಂಘರ್ಷದಲ್ಲಿ ಉಂಟಾದ ನಷ್ಟಗಳಿಗೆ ಪರಿಹಾರ ನೀಡಬೇಕು ಹಾಗೂ ಭವಿಷ್ಯದಲ್ಲಿ ಇರಾನ್ ಮೇಲೆ ದಾಳಿ ಮಾಡಬಾರದು ಎಂಬುದಕ್ಕೆ ಸ್ಪಷ್ಟವಾದ ಅಂತಾರಾಷ್ಟ್ರೀಯ ಭರವಸೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:

ಈ ಕುರಿತು ರಷ್ಯಾ ಮತ್ತು ಪಾಕಿಸ್ತಾನದ ನಾಯಕರೊಂದಿಗೆ ಮಾತನಾಡಿರುವುದಾಗಿ ಅವರು ತಿಳಿಸಿದ್ದಾರೆ. ಮಧ್ಯಪ್ರಾಚ್ಯ ಪ್ರದೇಶದಲ್ಲಿ ಶಾಂತಿ ಸ್ಥಾಪಿಸಲು ಇರಾನ್ ಬದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ಕಾರಣವಾಗಿಯೇ ಈ ಸಂಘರ್ಷ ಉಂಟಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಇದಕ್ಕೂ ಮೊದಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಬೇಷರತ್ತಾಗಿ ಶರಣಾಗಬೇಕು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಪೆಜೆಶ್ಕಿಯಾನ್, ಅದು ಅಮೆರಿಕದ ಅಸಾಧ್ಯ ಕನಸು ಮಾತ್ರ ಎಂದು ತಿರುಗೇಟು ನೀಡಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !