ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಯರಿಗೆ ಶೇ 33 ಸ್ಥಾನಗಳನ್ನು ನೀಡುವ ಮಹಿಳಾ ಮೀಸಲಾತಿ ಮಸೂದೆ ಅನ್ನು ಲೋಕಸಭೆ ಅಂಗೀಕರಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಹರ್ಷ ವ್ಯಕ್ತಪಡಿಸಿದ್ದಾರೆ.
ಮಸೂದೆಯನ್ನು ಬೆಂಬಲಿಸಿ ಮತ ಚಲಾಯಿಸಿದವರಿಗೆ ಪಕ್ಷಾತೀತವಾಗಿ ಬೆಂಬಲ ಸಲ್ಲಿಸುತ್ತೇನೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಮೋದಿ ಪೋಸ್ಟ್ ಮಾಡಿದ್ದಾರೆ.
‘ಅಂತಹ ಅದ್ಭುತ ಬೆಂಬಲದೊಂದಿಗೆ ಲೋಕಸಭೆಯಲ್ಲಿ ಸಂವಿಧಾನದ (ನೂರಾ ಇಪ್ಪತ್ತೆಂಟನೇ ತಿದ್ದುಪಡಿ) ಮಸೂದೆ, 2023 ರ ಅಂಗೀಕಾರಗೊಂಡಿರುವುದರಿಂದ ಸಂತೋಷವಾಗಿದೆ. ಈ ವಿಧೇಯಕವನ್ನು ಬೆಂಬಲಿಸಿ ಮತ ಹಾಕಿದ ಸಂಸದರಿಗೆ ಪಕ್ಷಾತೀತವಾಗಿ ಧನ್ಯವಾದ ಸಲ್ಲಿಸುತ್ತೇನೆ. ನಾರಿ ಶಕ್ತಿ ವಂದನ್ ಅಧಿನಿಯಮ್ ಒಂದು ಐತಿಹಾಸಿಕ ಶಾಸನವಾಗಿದ್ದು, ಇದು ಮಹಿಳಾ ಸಬಲೀಕರಣವನ್ನು ಮತ್ತಷ್ಟು ಹೆಚ್ಚಿಸುತ್ತದೆ. ನಮ್ಮ ರಾಜಕೀಯ ಪ್ರಕ್ರಿಯೆಯಲ್ಲಿ ಮಹಿಳೆಯರು ಇನ್ನೂ ಹೆಚ್ಚಿನ ಭಾಗವಹಿಸುವಿಕೆಯನ್ನು ಸಕ್ರಿಯಗೊಳಿಸುತ್ತದೆ’ ಎಂದು ಮೋದಿ ಹೇಳಿದ್ದಾರೆ.
नारी शक्ति वंदन अधिनियम के साथ नए सदन की शानदार शुरुआत हुई है। इससे महिलाओं के नेतृत्व में विकास को अभूतपूर्व गति मिलने वाली है। इसे जिस प्रकार से सभी राजनीतिक दलों का ऐतिहासिक समर्थन मिला है, वह विकसित और आत्मनिर्भर भारत के संकल्प की सिद्धि में मील का पत्थर साबित होगा। मैं सभी…
— Narendra Modi (@narendramodi) September 20, 2023
ಕಾಯ್ದೆಯೊಂದಿಗೆ ಹೊಸ ಸದನವು ಉತ್ತಮ ಆರಂಭವನ್ನು ಪಡೆದಿದೆ. ಇದು ಮಹಿಳಾ ನೇತೃತ್ವದ ಅಭಿವೃದ್ಧಿಗೆ ಅಭೂತಪೂರ್ವ ವೇಗವನ್ನು ನೀಡಲಿದೆ. ಇದು ಎಲ್ಲಾ ರಾಜಕೀಯ ಪಕ್ಷಗಳಿಂದ ಐತಿಹಾಸಿಕ ಬೆಂಬಲವನ್ನು ಪಡೆದಿದೆ. ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ಭಾರತದ ಸಂಕಲ್ಪವನ್ನು ಈಡೇರಿಸುವಲ್ಲಿ ಇದು ಒಂದು ಮೈಲಿಗಲ್ಲು ಎಂಬುದು ಸಾಬೀತಾಗಿದೆ. ಎಲ್ಲ ಸಂಸದರಿಗೂ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದುಹೇಳಿದರು.
.ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ 213 ಸದಸ್ಯರ ಬೆಂಬಲ ಅಗತ್ಯವಿತ್ತು. ಪರವಾಗಿ 454 ಸಂಸದರು ಮತದಾನ ಮಾಡಿದ್ದರೆ ವಿಧೇಯಕದ ವಿರುದ್ಧ ಇಬ್ಬರು ಸಂಸದರು ಮತ ಚಲಾಯಿಸಿದ್ದರು.