Sunday, September 14, 2025

ACCIDENT | ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗೆ ಮತ್ತೊಂದು ಬಲಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

 ಸ್ಕೂಟರ್‌ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಖಾಸಗಿ ಕಂಪನಿ ಉದ್ಯೋಗಿಯೊಬ್ಬರು ಮೃತಪಟ್ಟಿರುವ ಘಟನೆ ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸೂರು ಮುಖ್ಯ ರಸ್ತೆಯ ರೂಪೇನ ಅಗ್ರಹಾರ ಬಸ್ ನಿಲ್ದಾಣದ ಬಳಿ ಬುಧವಾರ ನಡೆದಿದೆ.

ಕೇರಳ ಮೂಲದ ಬೊಮ್ಮನಹಳ್ಳಿ ಸಮೀಪದ ಸುಭಾಷ್ ನಗರದ ನಿವಾಸಿ ಸೈಯದ್ ಜಾಫರ್ ಹುಸೇನ್ (33) ಮೃತ ದುರ್ದೈವಿ. ಈ ಘಟನೆ ಸಂಬಂಧ ಬಿಎಂಟಿಸಿ ಬಸ್ ಚಾಲಕ ಪರಶುರಾಮ್ ಅವರನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹೊಸೂರು ರಸ್ತೆಯ ರೂಪೇನಾ ಅಗ್ರಹಾರ ಬಳಿ ಸೈಯದ್ ಜಾಫರ್ ಹುಸೇನ್ ತೆರಳುವಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿ ಗಳು ಹೇಳಿದ್ದಾರೆ.

ಮಧ್ಯಾಹ್ನ 2.10 ರ ಸುಮಾರಿಗೆ ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ ಬೋರ್ಡ್ ಜಂಕನ್ ಕಡೆಗೆ ಬಿಎಂಟಿಸಿ ಬಸ್ ತೆರಳುತ್ತಿತ್ತು. ಆ ವೇಳೆ ಮಾರ್ಗ ಮಧ್ಯೆ ರೂಪೇನಾ ಅಗ್ರಹಾರ ಬಳಿ ಮುಂದೆ ಹೋಗುತ್ತಿದ್ದ ಸ್ಕೂಟರ್‌ಗೆ ಬಸ್ ಡಿಕ್ಕಿಯಾಗಿದೆ. ಆಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಸವಾರನ ಮೇಲೆ ಬಸ್ ಚಕ್ರಗಳು ಹರಿದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡು ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ.

ಇದನ್ನೂ ಓದಿ