ಹೊಸದಿಗಂತ ವರದಿ, ಹುಬ್ಬಳ್ಳಿ
ಐರಾವತ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ದಾರುಣ ಘಟನೆ ಬುಧವಾರ ಬೆಳಗ್ಗೆ ತಾಲೂಕಿನ ಶಿರಗುಪ್ಪಿ ಗ್ರಾಮದ ಬಳಿ ನಡೆದಿದೆ.
ಹುಬ್ಬಳ್ಳಿಯಿಂದ ಹಂಪಿ ಕಡೆಗೆ ಸಾಗುತ್ತಿದ್ದ ಕಾರು ಮತ್ತು ಹೈದ್ರಾಬಾದ್‌ನಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಐರಾವತ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಗುಜರಾತ್ ನಿಂದ ಹಂಪಿ ಪ್ರವಾಸಕ್ಕೆ ಕಾರಿನಲ್ಲಿ ಏಳು ಮಂದಿ ಬಂದಿದ್ದರು. ಅವರಲ್ಲಿ ಕಾರು ಚಾಲಕ ಹಾಗೂ ಪ್ರವಾಸಿಯೊಬ್ಬರು ಮೃತಪಟ್ಟಿದ್ದಾರೆ. ಉಳಿದವರು ಗಾಯಗೊಂಡಿ ದ್ದಾರೆ. ಗಾಯಳುಗಳನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ರವಾನಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ