ಬೈಕ್-ಬೊಲೆರೋ ಡಿಕ್ಕಿ : ಬೈಕ್‌ ಸವಾರ ಸ್ಥಳದಲ್ಲೇ ಸಾವು

ಹೊಸದಿಗಂತ ವರದಿ ಮಂಡ್ಯ:
ಬೈಕ್ ಹಾಗೂ ಬೊಲೆರೋ ವಾಹನವು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬಾಚನಹಳ್ಳಿ ಬಳಿಯ ಮಳವಳ್ಳಿ-ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿ-209ರಲ್ಲಿ ಶನಿವಾರ ರಾತ್ರಿ ನಡೆದಿದೆ.
ಕೊಳ್ಳೇಗಾಲ ತಾಲ್ಲೂಕಿನ ಕಾಮಗೆರೆ ಗ್ರಾಮದ ರವಿ(35) ಮೃತಪಟ್ಟ ಬೈಕ್ ಸವಾರ. ರವಿ ತಮ್ಮ ಬೈಕ್ ನಲ್ಲಿ ಪಟ್ಟಣದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಬಾಚನಹಳ್ಳಿ ಬಳಿ ಎದುರುಗಡೆಯಿಂದ ವೇಗವಾಗಿ ಬಂದ ಬೊಲೆರೋ ವಾಹನ ಡಿಕ್ಕಿ ಹೊಡೆದಿದ್ದು, ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣವಾಗಿ ಜಖಂ ಆಗಿದೆ.
ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!