ಬೈಕ್​, ಟ್ರ್ಯಾಕ್ಟರ್​ ನಡುವೆ ಅಪಘಾತ: ಓರ್ವ ಸಾವು, ಮತ್ತಿಬ್ಬರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್​ನ ದ್ವಾರಕದ ಖಂಭಾಲಿಯಲ್ಲಿರುವ ಸಲಯ್​ ಬಂದರ್​ನಲ್ಲಿ ಟ್ರ್ಯಾಕ್ಟರ್‌ಗೆ ದ್ವಿಚಕ್ರವಾಹನ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶಾಲೆ ಮುಗಿಸಿ ಬಂದ ಮಗಳನ್ನು ತಂದೆ ಬೈಕ್ ನಲ್ಲಿ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಅವರು ತಮ್ಮ ಬೈಕ್ ನಲ್ಲಿ ತ್ರಿಬಲ್​ ರೈಡ್ ಮಾಡಿಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ರಸ್ತೆ ಮಧ್ಯದಲ್ಲಿ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ಪರಿಣಾಮ ಬೈಕ್ ಪಲ್ಟಿಯಾಗಿದ್ದು, ಬೈಕ್​ನಲ್ಲಿದ್ದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಗಂಭೀರವಾಗಿ ಗಾಯಗೊಂಡಿರುವ ಇತರ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!