ಹೊಸದಿಗಂತ ಡಿಜಿಟಲ್ ಡೆಸ್ಕ್:
ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಮತ್ತಿಬ್ಬರು ಗಾಯಗೊಂಡಿರುವ ಘಟನೆ ಸಿಟಿ ಮಾರ್ಕೆಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಮೂಲದ ಆಕಾಶ್ (26) ಮತ್ತು ಮಂಗಳೂರು ಮೂಲದ ಅಫ್ಜಲ್ (26) ಮೃತರು. ಮಣಿ ಮತ್ತು ಕಾಸಿಂ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರಿದಿದೆ.
ಮಂಗಳವಾರ ಮುಂಜಾನೆ ಸುಮಾರು 1.30ಕ್ಕೆ ಬಿಜಿಎಸ್ ಮೇಲೇತುವೆಯಲ್ಲಿ ಈ ದುರ್ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಸವಾರರಾದ ಕೆ.ಪಿ.ಅಗ್ರಹಾರ ನಿವಾಸಿ ಆಕಾಶ್ ಗ್ರೈಂಡರ್ ಮೆಕ್ಯಾನಿಕ್ ಕೆಲಸ ಮತ್ತು ವಿಜಯನಗರ ನಿವಾಸಿ ಅಫ್ಜಲ್ ಬಟ್ಟೆ ಪಾದಚಾರಿ ಮಾರ್ಗದಲ್ಲಿ ವ್ಯಾಪಾರ ಮಾಡುತ್ತಿದ್ದ ಎಂದು ತಿಳಿದುಬಂದಿದೆ.