ಹೊಸ ದಿಗಂತ ವರದಿ ಹುಬ್ಬಳ್ಳಿ:
ನಗರದ ಹೊರವಲಯದ ತಾರಿಹಾಳ ಬೈಪಾಸನಲ್ಲಿ ಬೆಳಿಗ್ಗೆ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತವಾಗಿದ್ದು ಸ್ಥಳದಲ್ಲಿ ಕಾರಿನ ಚಾಲಕ ಮೃತರಾಗಿದ್ದಾರೆ.
ಹಳೆ ಹುಬ್ಬಳ್ಳಿ ನಿವಾಸಿ ಜಗದೀಶ ಶೆಟ್ಟಿ (36) ಕುಟುಂಬದ ಸಮೇತ ಉಳವಿ ದೇವಸ್ಥಾನಕ್ಕೆ ಹೋಗುವ ವೇಳೆ ಬಾಂಬೆಯಿಂದ ಬೆಂಗಳೂರಿಗೆ ಹೊರಟಿದ್ದ ಶರ್ಮ ಟ್ರಾವೆಲ್ಸ್ ಬಸ್ ಡಿಕ್ಕಿಯಾದ ಪರಿಣಾಮ ಕಾರಿನ ಚಾಲಕ ಮೃತನಾಗಿದ್ದಾನೆ. ಕಾರಿನಲ್ಲಿದ್ದ ಮೂರು ಮಕ್ಕಳು ಓರ್ವ ಮಹಿಳೆಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಉತ್ತರ ಸಂಚಾರ ಪೊಲೀಸರು ಸ್ಥಳಕ್ಕೆ ನೀಡಿ ಪರಿಶೀಲನೆ ನಡೆಸಿ ಗಾಯಗೊಂಡವರನ್ನು ನಗರದ ಕಿಮ್ಸ್ ರವಾನಿಸಲಾಗಿದೆ.