Monday, October 20, 2025

ಕಾರು, ಬೈಕ್‌ ನಡುವೆ ಅಪಘಾತ: ಜಾತಿಗಣತಿಗೆ ತೆರಳಿದ್ದ ಇಬ್ಬರು ಶಿಕ್ಷಕರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾತಿಗಣತಿಯ ಕೆಲಸದಿಂದ ಮನೆಗೆ ಮರಳುತ್ತಿದ್ದ ಇಬ್ಬರು ಶಿಕ್ಷಕರು ಅಪಘಾತದಲ್ಲಿ ಗಾಯಗೊಂಡ ಘಟನೆ ಹೆಚ್‌.ಡಿ. ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ. ಕಾರು ಮತ್ತು ಬೈಕ್‌ ನಡುವೆ ಸಂಭವಿಸಿದ ಈ ಅಪಘಾತದಲ್ಲಿ ಮುಖ್ಯಶಿಕ್ಷಕನ ಕಾಲು ಮುರಿದಿದ್ದು, ಸಹ ಶಿಕ್ಷಕಿಗೆ ಸಣ್ಣಪುಟ್ಟ ಗಾಯವಾಗಿದೆ.

ಗಾಯಾಳುಗಳನ್ನು ಬೂದನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸ್ವಾಮೀಗೌಡ ಹಾಗೂ ಸಹ ಶಿಕ್ಷಕಿ ಮಧುಶ್ರೀ ಎಂದು ಗುರುತಿಸಲಾಗಿದೆ.

ಅದೃಷ್ಟವಶಾತ್‌ ಈ ಅಪಘಾತದಲ್ಲಿ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳೀಯರು ಕೂಡಲೇ ಅವರನ್ನು ರಕ್ಷಿಸಲು ಮುಂದಾಗಿದ್ದಾರೆ. ಘಟನೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

error: Content is protected !!