ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಸಿಎಂ ಡಿಕೆ ಶಿವಕುಮಾರ್ ಇಂದು ಬೆಳಗ್ಗೆಯಿಂದ ಬೆಂಗಳೂರು ನಗರದಲ್ಲಿ ರೌಂಡ್ಸ್ ಹಾಕುತ್ತಿದ್ದು, ಈ ವೇಳೆ ಅವಘಡ ಸಂಭವಿಸಿದೆ. ಪಾಲಿಕೆ ವಾಹನಗಳ ನಡುವೆ ಡಿಕ್ಕಿಯಾದ ಘಟನೆ ಇಂದು ನಡೆದಿದೆ.
ಮಾಗಡಿ ರಸ್ತೆಯಲ್ಲಿ ಡಿಕೆಶಿ ವಾಹನ ಹಿಂಬಾಲಿಸುತ್ತಿದ್ದ ಪಾಲಿಕೆ ಆಯುಕ್ತರ ವಾಹನಕ್ಕೆ ಹಿಂಬದಿಯಿಂದ ಬರುತ್ತಿದ್ದ ಮತ್ತೊಂದು ಪಾಲಿಕೆ ವಾಹನ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಡಿಕ್ಕಿ ಹೊಡೆದ ವಾಹನದಲ್ಲಿ ಕಮಿಷನರ್ ಇರಲಿಲ್ಲ, ಹಾಗಾಗಿ ಯಾವುದೇ ದುರಂತ ನಡೆದಿಲ್ಲ ಎಂದು ತಿಳಿದು ಬಂದಿದೆ.