ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಜೋರು ಮಳೆಗೆ ರಸ್ತೆ ಕಾಣದೆ ಲಾರಿಗೆ ಡಿಕ್ಕಿ ಹೊಡೆದ ಕಾರು: ಸ್ಥಳದಲ್ಲೇ ಐದು ಮಂದಿ ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೇರಳದಲ್ಲಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಕೇರಳದ ಕಲ್ಲಿಕೋಟೆಯ ರಾಮನಟ್ಟುಕಾರ ಸಮೀಪ ವೈದ್ಯಾರಂಗಡಿ ಬಳಿ ಪುಲಿನ್ಜೋಡ್ ರಸ್ತೆ ಬಳಿ ಸಂಭವಿಸಿದ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ.
ಪಾಲಕ್ಕಾಡ್‌ನ ಚೆರ್ಪುಲ್ಲಸಿರಿ ನಿವಾಸಿಗಳಾದ ನಾಸರ್, ಜುಬೈರ್, ಮೊಹಮ್ಮದ್ ಸಾಹೀರ್, ಹಸನಾರ್ ಮತ್ತು ತಾಹಿರ್ ಮೃತರು. ಇವರು ಬೊಲೆರೋದಲ್ಲಿ ಕರಿಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಭಾರೀ ಮಳೆ ಇದ್ದ ಕಾರಣ ರಸ್ತೆ ಸರಿಯಾಗಿ ಕಾಣದೆ ಎದುರಿಗೆ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಎಲ್ಲರೂ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss