Friday, March 5, 2021

Latest Posts

ಟ್ರಕ್-ಕಾರಿನ ನಡುವೆ ಭೀಕರ ಅಪಘಾತ: ಸ್ಥಳದಲ್ಲಿಯೇ 8 ಜನರ ಸಾವು

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕತಿಹಾರ್’ನಲ್ಲಿ ಟ್ರಕ್ ಮತ್ತು ಕಾರಿನ ನಡುವೆ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, 8 ಜನ ದಾರುಣವಾಗಿ ಮೃತಪಟ್ಟಿದ್ದಾರೆ.

ಈ ದುರ್ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹಾಗೂ ಗಾಯಾಳುಗಳು ಪಶ್ಚಿಮ ಬಂಗಾಳ ಮೂಲದವರಾಗಿದ್ದು, ವಿವಾಹ ಸಮಾರಂಭ ಮುಗಿಸಿಕೊಂಡು ಹಿಂದಿರುಗುವ ವೇಳೆ ಈ ಅಪಘಾತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು  ತನಿಖೆ ನಡೆಸುತ್ತಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss