ಹೊಸದಿಗಂತ ಮಳವಳ್ಳಿ:
ತಾಲ್ಲೂಕಿನ ಅಟುವನಹಳ್ಳಿ ಬಳಿ ಶುಕ್ರವಾರ ಸಂಜೆ ಬೈಕ್ ಗೆ ಹಿಂಬದಿಯಿಂದ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕಂದೇಗಾಲ ಗ್ರಾಮದ ರಾಮಕೃಷ್ಣ ಎಂಬುವವರ ಪತ್ನಿ ಉಮಾ(38) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತ ಮಹಿಳೆ ಉಮಾ ತಮ್ಮ ಸಂಬಂಧಿ ವೀರೇಶ್ ಅವರ ಜತೆ ಬೈಕ್ ನಲ್ಲಿ ಹಲಗೂರಿಗೆ ಹೋಗಿ ವಾಪಾಸ್ ಬರುತ್ತಿದ್ದಾಗ ಹಿಂದಿನಿಂದ ಬಂದ ಆಂದ್ರಪ್ರದೇಶ ಮೂಲದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಉಮಾ ಅವರು ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಬೈಕ್ ಸವಾರ ವೀರೇಶ್ ಅವರು ಕಾಲಿನ ಮೂಳೆ ಮುರಿದಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದು ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.