ಎರಡು ವಾಹನಗಳ ನಡುವೆ ಅಪಘಾತ: ಎಂಟು ಮಂದಿ ದಾರುಣ ಸಾವು, ಒಬ್ಬರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬುಧವಾರ ತಡರಾತ್ರಿ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಬೆಟ್ಮಾ ಬಳಿ ಇಂದೋರ್-ಅಹಮದಾಬಾದ್ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಎಸ್‌ಯುವಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಟ್ಮಾ ಪೊಲೀಸ್ ಠಾಣಾ ವ್ಯಾಪ್ತಿಯ ಇಂದೋರ್-ಅಹಮದಾಬಾದ್ ಹೆದ್ದಾರಿಯಲ್ಲಿ ಬೊಲೆರೋ ಕಾರು ಅಪಘಾತದ ಬಗ್ಗೆ ನಮಗೆ ತಿಳಿದು ಬಂದಿದ್ದು. ವಾಹನದಲ್ಲಿ ಒಂಬತ್ತು ಜನರಿದ್ದರು ಮತ್ತು ಅವರಲ್ಲಿ 8 ಜನರು ಸಾವನ್ನಪ್ಪಿದ್ದಾರೆ ಎಂದು ಡಿಎಸ್ಪಿ ಉಮಾಕಾಂತ್ ಚೌಧರಿ ಮಾಹಿತಿ ನೀಡಿದ್ದಾರೆ.

ಅಪಘಾತದಲ್ಲಿ ಸಾವನ್ನಪ್ಪಿದ ಎಂಟು ಜನರಲ್ಲಿ ಒಬ್ಬ ಪೊಲೀಸ್ ಪೇದೆ. ಎಲ್ಲಾ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ಘಟನೆಯಲ್ಲಿ ಗಾಯಗೊಂಡ ಇತರ ವ್ಯಕ್ತಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!