Monday, October 2, 2023

Latest Posts

ಮೈಸೂರು ರಸ್ತೆ ಅಪಘಾತ ಪ್ರಕರಣ: ಮೃತರ ಸಂಖ್ಯೆ 11ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರುಬೂರು ಬಳಿಯಲ್ಲಿ ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವಿನ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ.

ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗಳಾಗಿ ಶಶಿಕುಮಾರ್ ಎಂಬುವವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ದಾರುಣ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಮೇ 29ರಂದು ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ 10 ಮಂದಿ ಸಾವನ್ನಪ್ಪಿದ್ದರು. ಮೃತ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಲಾ 2 ಲಕ್ಷ ಪರಿಹಾರವನ್ನು ಕೂಡ ಘೋಷಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!