ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಧರಿಹನುಮಾನ್ ಕ್ರಾಸ್ ಬಳಿ ಅತಿವೇಗದ ಚಾಲನೆಯಿಂದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
ವಾಹನ ಪಲ್ಟಿಯಾಗಿದ್ದು, ಶಿವಕುಮಾರ್ ಪಾಟೀಲ್ (47) ಎಂಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವ್ಯಕ್ತಿ ಔರಾದ್ ತಾಲೂಕಿನ ಧೂಪತ್ ಮಹಾಗಾಂವ್ ಗ್ರಾಮದವರಾಗಿದ್ದು, ಸಂತಪೂರ್ ಕಡೆಯಿಂದ ಸ್ವ ಗ್ರಾಮಕ್ಕೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಈ ಅಪಘಾತದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ಈ ಸಂಬಂಧ ಸಂತಪೂರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.