ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ್ದಾನೆ. ಯುವಕನೊಬ್ಬ ಸದಾಬಾದ್‌ನಿಂದ ಫತೇಹಾಬಾದ್‌ಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಈ ವೇಳೆ ಎದುರಿನಿಂದ ಬರುತ್ತಿದ್ದ ವ್ಯಾನ್‌ಗೆ ಯುವಕನ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಗಾಳಿಯಲ್ಲಿ ಹಾರಿ ಹೋಗಿ ಬಿದ್ದಿದ್ದಾನೆ. ಗಂಭೀರವಾಗಿ ಗಾಯಗೊಂಡ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ದುರಂತದ ದೃಶ್ಯವು ಹತ್ತಿರದ ಕಣ್ಗಾವಲು ಕ್ಯಾಮೆರಾದಲ್ಲಿ ಸೆರೆಯಾಗಿದೆ ಮತ್ತು ದೃಶ್ಯಗಳನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಬೈಕ್ ಸವಾರನ ವೇಗವೇ ಅಪಘಾತಕ್ಕೆ ಕಾರಣ ಎಂದು ತನಿಖೆಯಿಂದ ತಿಳಿದುಬಂದಿದೆ.