ಹೊಸದಿಗಂತ ಬೆಳಗಾವಿ:
ಚತುಷ್ಪಥ ಹೆದ್ದಾರಿ ಕಾಮಗಾರಿಯಲ್ಲಿ ನಿರತರಾಗಿದ್ದ ಕಾರ್ಮಿಕರ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ಇಟಗಿ ಕ್ರಾಸ್ ಬಳಿ ರವಿವಾರ ಮಧ್ಯಾಹ್ನ ಸಂಭವಿಸಿದೆ.
ಪುಣೆ -ಬೆಂಗಳೂರು ಚತುಷ್ಪಥ ಹೆದ್ದಾರಿಯಲ್ಲಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದ ವೇಳೆ ಏಕಾಏಕಿ ಕಾರ್ಮಿಕರ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಮೂರು ಜನ ಸ್ಥಳದಲ್ಲಿಯೇ ಮೃತಪಟ್ಟರೆ, ಓರ್ವನ ಸ್ಥಿತಿ ಗಂಭೀರವಾಗಿದೆ.
ಕಲಬುರಗಿ ಜಿಲ್ಲೆಯ ಮೂಲದವರಾದ ರಾಮಣ್ಣ, ಮಹೇಶ್, ರಾಮಚಂದ್ರ ಮೃತ ದುರ್ದೈವಿಗಳು. ಲಕ್ಷ್ಮೀಬಾಯಿ, ಅನುಶ್ರೀ, ಭೀಮಾಬಾಯಿ ಗೆ ಗಂಭೀರ ಗಾಯಗೊಂಡಿದ್ದಾರೆ.
ಕಾರ್ಮಿಕರ ಮೇಲೆ ಹರಿದ ಟ್ಯಾಂಕರ್ ಸರ್ವಿಸ್ ರಸ್ತೆಯಲ್ಲಿ ಹೋಗಿ ಪಲ್ಟಿಯಾಗಿದ್ದು, ಚಾಲಕನ ಸ್ಥಳೀಯೂ ಗಂಭೀರವಾಗಿದೆ. ಆಯಿಲ್ ತುಂಬಿದ್ದ ಟ್ಯಾಂಕರ್ ನಲ್ಲಿ ಸಿಲುಕಿದ್ದ ಚಾಲಕನನ್ನು ಹೊರ ತೆಗೆಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಗಾಯಗೊಂಡವರನ್ನು ಇಲ್ಲಿನ ಬಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.