August 29, 2026
Saturday, August 29, 2026
spot_img

ದೇವಾಲಯ ನಿರ್ಮಾಣ ಕಾಮಗಾರಿ ವೇಳೆ ಅವಘಡ: ಛಾವಣಿ ಕುಸಿದು 7 ಭಕ್ತರ ದಾರುಣ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯ ಯಶ್ವಾಡಿ ಗ್ರಾಮದಲ್ಲಿರುವ ದೇವಾಲಯದಲ್ಲಿ ಶನಿವಾರ ಸಂಭವಿಸಿದ ದುರಂತದಲ್ಲಿ 7 ಭಕ್ತರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ದೇವಾಲಯದ ಗರ್ಭಗುಡಿಯ ಮುಂಭಾಗದಲ್ಲಿದ್ದ ಸಭಾ ಮಂಟಪದ ಛಾವಣಿ ನಿರ್ಮಾಣ ಕಾಮಗಾರಿ ವೇಳೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ.

ಮಧ್ಯಾಹ್ನ ಸುಮಾರು 3.30ರ ವೇಳೆಗೆ ಈ ಘಟನೆ ನಡೆದಿದ್ದು, ಸುಮಾರು 30 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಜಿಲ್ಲಾಡಳಿತದ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿವೆ.

ಗಾಯಗೊಂಡ ಭಕ್ತರನ್ನು ಪರ್ಭಾನಿ ಜಿಲ್ಲಾ ನಾಗರಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಚಿಕಿತ್ಸೆ ಮುಂದುವರಿದಿದೆ. ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲು ಯುದ್ಧೋಪಾದಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.

ಯಶ್ವಾಡಿ ಗ್ರಾಮದಲ್ಲಿರುವ ಈ ದೇವಾಲಯವು ಛತ್ರಪತಿ ಸಂಭಾಜಿನಗರದಿಂದ ಸುಮಾರು 190 ಕಿಲೋಮೀಟರ್ ದೂರದಲ್ಲಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !