ದೇವಾಲಯ ನಿರ್ಮಾಣ ಕಾಮಗಾರಿ ವೇಳೆ ಅವಘಡ: ಛಾವಣಿ ಕುಸಿದು 7 ಭಕ್ತರ ದಾರುಣ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯ ಯಶ್ವಾಡಿ ಗ್ರಾಮದಲ್ಲಿರುವ ದೇವಾಲಯದಲ್ಲಿ ಶನಿವಾರ ಸಂಭವಿಸಿದ ದುರಂತದಲ್ಲಿ 7 ಭಕ್ತರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ದೇವಾಲಯದ ಗರ್ಭಗುಡಿಯ ಮುಂಭಾಗದಲ್ಲಿದ್ದ ಸಭಾ ಮಂಟಪದ ಛಾವಣಿ ನಿರ್ಮಾಣ ಕಾಮಗಾರಿ ವೇಳೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ. ಮಧ್ಯಾಹ್ನ ಸುಮಾರು 3.30ರ ವೇಳೆಗೆ ಈ ಘಟನೆ ನಡೆದಿದ್ದು, ಸುಮಾರು 30 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಜಿಲ್ಲಾಡಳಿತದ ತಂಡಗಳು ಸ್ಥಳಕ್ಕೆ ಧಾವಿಸಿ … Continue reading ದೇವಾಲಯ ನಿರ್ಮಾಣ ಕಾಮಗಾರಿ ವೇಳೆ ಅವಘಡ: ಛಾವಣಿ ಕುಸಿದು 7 ಭಕ್ತರ ದಾರುಣ ಸಾ*ವು