September 28, 2026
Monday, September 28, 2026
spot_img

ವಿಟ್ಲಪಿಂಡಿ ಸಂಭ್ರಮದ ನಡುವೆ ಅವಘಡ: ವಿಸರ್ಜನೆಗೂ ಮುನ್ನ ಭಗ್ನವಾಯ್ತು ಶ್ರೀಕೃಷ್ಣನ ಮೂರ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಡುಪಿ ಶ್ರೀಕೃಷ್ಣ ಮಠದ ವಿಟ್ಲಪಿಂಡಿ ಉತ್ಸವದಲ್ಲಿ ಅನಿರೀಕ್ಷಿತ ಘಟನೆಯೊಂದು ನಡೆದಿದ್ದು ಭಕ್ತರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಹೌದು! ವಿಟ್ಲಪಿಂಡಿ ಉತ್ಸವದ ಕೊನೆಯ ಹಂತದಲ್ಲಿ ಕೃಷ್ಣನ ಮಣ್ಣಿನ ಮೂರ್ತಿ ಕೈಯಿಂದ ಜಾರಿ ಕೆಳಗೆ ಬಿದ್ದು ಭಗ್ನವಾದ ಘಟನೆ ನಡೆದಿದೆ.

ಉಡುಪಿ ಶ್ರೀಕೃಷ್ಣ ಮಠದಲ್ಲಿ ಚಾತುರ್ಮಾಸದ ಹಿನ್ನೆಲೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಕೃಷ್ಣನ ಮಣ್ಣಿನ ಮೂರ್ತಿಯನ್ನು ಚಿನ್ನದ ರಥದಲ್ಲಿ ರಥಾರೂಢಗೊಳಿಸಿ ರಥಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು. ರಥೋತ್ಸವ ಕೊನೆಗೊಂಡ ಬಳಿಕ ಮಣ್ಣಿನ ಮೂರ್ತಿಯನ್ನು ರಥದಿಂದ ಇಳಿಸಿ ಮಧ್ವ ಸರೋವರದಲ್ಲಿ ವಿಸರ್ಜನೆಗೆ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ಅನಿರೀಕ್ಷಿತವಾಗಿ ಕೈಯಿಂದ ಮೂರ್ತಿ ಆಕಸ್ಮಿಕವಾಗಿ ಜಾರಿ ಕೆಳಗೆ ಬಿದ್ದಿದೆ.

Must Read