ಯಮುನಾ ಎಕ್ಸ್‌ಪ್ರೆಸ್‌ ವೇ ನಲ್ಲಿ ಭೀಕರ ಅಪಘಾತ; ಕರ್ನಾಟಕದ ವ್ಯಕ್ತಿ ಸೇರಿ ಐವರ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್‌
ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಾರಾಷ್ಟ್ರದ ನಾಲ್ವರು ಮತ್ತು ಕರ್ನಾಟಕದ ಒಬ್ಬರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗಿನ ಜಾವ 5 ಗಂಟೆಗೆ ರಸ್ತೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇತರ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರಿಗೆ ತ್ವರಿತಗತಿಯಲ್ಲಿ ಸೂಕ್ತ ಚಿಕಿತ್ಸೆ ನೀಡುವಂತೆ ಗೌತಮ್ ಬುದ್ಧ ನಗರ ಜಿಲ್ಲೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
“ಏಳು ಜನರು ಮಹೀಂದ್ರಾ ಬೊಲೆರೊದಲ್ಲಿ ಪ್ರಯಾಣಿಸುತ್ತಿದ್ದರು. ಆಗ್ರಾದಿಂದ ನೋಯ್ಡಾ ಕಡೆಗೆ ಸಾಗುವ ಮಾರ್ಗದಲ್ಲಿರುವ ಜೆವಾರ್ ಟೋಲ್ ಪ್ಲಾಜಾ ಬಳಿ ಪ್ರಯಾಣಿಕರಿದ್ದ ಜೀಪು ಹಿಂಬದಿಯಿಂದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ” ಎಂದು ಗೌತಮ್ ಬುದ್ಧ ನಗರ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಟ್ರಕ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!