April 15, 2026
Wednesday, April 15, 2026
spot_img

ಬಾಗಲಕೋಟೆಯಲ್ಲಿ ಆಕ್ಸಿಡೆಂಟ್‌: ಟ್ರ್ಯಾಕ್ಟರ್‌ ಪಲ್ಟಿಯಾಗಿ ಮಗು ಸೇರಿ ನಾಲ್ವರ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಾಗಲಕೋಟೆಯ ಜಮಖಂಡಿ ತಾಲೂಕಿನ ಕಟ್ಟೆ ಕೆರೆ ಸಮೀಪ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಎರಡು ವರ್ಷದ ಕಂದಮ್ಮ ಸೇರಿ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಬ್ಬಿನ ಕಟಾವು ಕೆಲಸಕ್ಕೆ ತೆರಳಲು ಎಲ್ಲರೂ ಟ್ರ್ಯಾಕ್ಟರ್‌ನಲ್ಲಿ ಕುಳಿತಿದ್ದರು.

ತೆರಳುತ್ತಿದ್ದಂತೆಯೇ ಟ್ರ್ಯಾಕ್ಟರ್‌ನ ಟ್ರ್ಯಾಲಿ ಏಕಾಏಕಿ ಕಟ್‌ ಆಗಿ ಪಲ್ಟಿಯಾಗಿದೆ. ಮೃತರನ್ನು ಮನೀಷ್ ಪಾಂಡೆ (23), ಹಲಕಿ ಪಾಂಡೆ (2), ಲಕ್ಷ್ಮಿ ಚಿರಮಡಿ (27) ಹಾಗೂ ರೇಖಾ ಭೂಕೆ ಎಂದು ಗುರುತಿಸಲಾಗಿದೆ.

ಮೃತರು ಮಹಾರಾಷ್ಟ್ರ ರಾಜ್ಯದ ಯುವತ್ಮಾಳ್ ಜಿಲ್ಲೆಯ ಬೂಸಾ ತಾಲ್ಲೂಕಿನ ಗುಪವಾಡಿ ನಿವಾಸಿಗಳಾಗಿದ್ದು, ಕಬ್ಬಿನ ಕಟಾವು ಕೆಲಸಕ್ಕಾಗಿ ಜಮಖಂಡಿ ಭಾಗಕ್ಕೆ ಆಗಮಿಸಿದ್ದರು ಎನ್ನಲಾಗಿದೆ. ಅಪಘಾತದ ತೀವ್ರತೆಗೆ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಜಮಖಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !