Wednesday, July 6, 2022

Latest Posts

ನೀರಿನ ಟ್ಯಾಂಕರ್ ಗೆ ಕಾರು ಡಿಕ್ಕಿ: ವ್ಯಕ್ತಿ ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಹುಬ್ಬಳ್ಳಿ:

ತಾಲೂಕಿನ ಬುಡರಸಿಂಗಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬಳಿ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ನಿಲ್ಲಿಸಲಾಗಿದ್ದ ನೀರಿನ ಟ್ಯಾಂಕರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಚಾಲಕ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಅಪಘಾತದಲ್ಲಿ ಹೊಸರಿತ್ತಿ ಗ್ರಾಮದ ಮುಕ್ತಮಸಾಬ ಮೃತಪಟ್ಟಿದ್ದಾರೆ.
ಹಾವೇರಿಯಿಂದ ವೇಗವಾಗಿ ನಗರಕ್ಕೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಡಿಕ್ಕಿ ಹೊಡೆದಾಗ ಮುಕ್ತಸಾಬರಿಗೆ ಬಲವಾದ ಪೆಟ್ಟು ಬಿದ್ದು ಗಂಭೀರ ಗಾಯಗೊಂಡಿದ್ದರು. ಕಿಮ್ಸ್ ದಾಖಲಿಸಿದ್ದಾಗ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ‌. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸ ಮೂಲಗಳು ತಿಳಿಸಿವೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss