ಹೊಸದಿಗಂತ ಡೆಜಿಟಲ್ ಡೆಸ್ಕ್
ಮಹಾರಾಷ್ಟ್ರದ ಲಾತೂರ್ ಬಳಿಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ.
ಲಾತೂರ್ – ಅಂಬಾಜೋಗೈ ರಸ್ತೆ ಸಮೀಪದ ಸೈಂಗಾವ್ ಬಳಿ ಟ್ರಕ್ ಮತ್ತು ಕ್ರೂಸರ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಹನ್ನೊಂದು ಜನರಿಗೆ ಗಂಭೀರ ಗಾಯಗಳಾಗಿವೆ.
ಸೈಂಗಾವ್ ಬಳಿ ಟ್ರಕ್ ಮತ್ತು ಕ್ರೂಸರ್ ಡಿಕ್ಕಿಯಾಗಿವೆ.
ಅಪಘಾತದಲ್ಲಿ ಎಂಟು ಜನರು ಸ್ಥಳದಲ್ಲೇ ಸಾವನ್ನಪ್ಪಿ, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಬರ್ದಾಪುರ ಠಾಣೆಯ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಅಶೋಕ್ ಖಾರತ್ ಮಾಹಿತಿ ನೀಡಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ