Wednesday, October 22, 2025

SHOCKING | ಮಾರಿಷಸ್ ನಲ್ಲಿ ಅವಘಡ: ಸುಳ್ಯ ಮೂಲದ ವಿದ್ಯಾರ್ಥಿ ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಯುವಕನೋರ್ವ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ನಡುಗಲ್ಲು ಕಲ್ಲಾಜೆಯ ಜಯಲಕ್ಷ್ಮಿ ಎಂಬವರ ಪುತ್ರ ನಂದನ ಎಸ್. ಭಟ್ (25) ಮೃತ ವಿಧ್ಯಾರ್ಥಿಯಾಗಿದ್ದಾರೆ.

ನಂದನ, ಮಾರಿಷಸ್ ದೇಶದಲ್ಲಿ ಡಿಪ್ಲೊಮಾ ಇನ್ ಹಾಸ್ಪಿಟಾಲಿಟಿ ಆಂಡ್ ಟೂರಿಸಮ್ ವಿಷಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯಾಗಿದ್ದು ವಿಧ್ಯಾರ್ಥಿ ವೀಸಾದಲ್ಲಿ ವಾಸ್ತವ್ಯವಾಗಿದ್ದು ಅಲ್ಲಿ ಜಲಪಾತ ವೀಕ್ಷಣೆಗೆ ಹೋಗಿದ್ದ ವೇಳೆಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಮೃತದೇಹವನ್ನು ಮಾರಿಷಸ್
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮೃತದೇಹವನ್ನು ಅಲ್ಲಿನ ಸರಕಾರಿ ವ್ಯವಸ್ಥೆ ಮೂಲಕ ಹಾಗೂ ಇಲ್ಲಿನ ಸರಕಾರದ ಸಹಾಯದಿಂದ ಕರೆತರಲು ವ್ಯವಸ್ಥೆ ಮಾಡುವಂತೆ ಮೃತ ಯುವಕನ ತಾಯಿಯ ಸಹೋದರ ಕಾರ್ಕಳ ಸತ್ಯನಾರಾಯಣ ಭಟ್ ಅವರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಕೋಟ ಶ್ರೀನಿವಾಸ ಪೂಜಾರಿ ಅವರು ವಿದೇಶ ಸಚಿವ ಜೈಶಂಕರ್ ಅವರಿಗೆ ಮನವಿ ಮಾಡಿ ಪೂರಕ ಕ್ರಮಕ್ಕೆ ವಿನಂತಿಸಿದ್ದಾರೆ.

ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರೂ ಕೂಡ ಕೇಂದ್ರ ಸರಕಾರಕ್ಕೆ ಮಾಹಿತಿ ನೀಡಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲು ಮನವಿ ಮಾಡಿದ್ದಾರೆ.

error: Content is protected !!