ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಬಸ್ ಅಪಘಾತ ಸಂಭವಿಸಿದ್ದು, 18 ಮಂದಿ ಮೃತಪಟ್ಟಿದ್ದಾರೆ.
ಖುಜ್ದಾರ್ ಜಿಲ್ಲೆಯಲ್ಲಿ ಅತಿ ವೇಗವಾಗಿ ತೆರಳುತ್ತಿದ್ದ ಬಸ್, ತಿರುವಿನಲ್ಲಿ ನಿಯಂತ್ರಣ ತಪ್ಪಿ ಬಿದ್ದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರ ಮಾಹಿತಿ ಪತ್ತೆಯಾಗಿಲ್ಲ. ಅಪಘಾತದಲ್ಲಿ ಮೂವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 18 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.