ಹೊಸದಿಗಂತ ಡಿಜಿಟಲ್ ಡೆಸ್ಕ್
ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ 9 ಜನರು ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬುಫ್ಲಿಯಾಜ್ ಕಡೆಗೆ ತೆರಳುತ್ತಿದ್ದ ಕಾರು ಟರ್ನ್ ವಾಲಿ ಎಂಬಲ್ಲಿ ಆಳವಾದ ಕಮರಿಗೆ ಉರುಳಿದೆ. ವಾಹನದಲ್ಲಿ ಒಟ್ಟು 13 ಮಂದಿ ಪ್ರಯಾಣ ಮಾಡುತ್ತಿದ್ದರು. ಇವರೆಲ್ಲ ಸುರಾನ್ಕೋಟೆ ಉಪ ವಿಭಾಗಕ್ಕೆ ಸೇರಿದ ಮರಹಾ ಎಂಬ ಗ್ರಾಮದಲ್ಲಿ ಮದುವೆ ಮುಗಿಸಿ, ವಾಪಸ್ ಬರುತ್ತಿದ್ದರು. ಅವಘಡದಲ್ಲಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಾರು ಕಂದಕಕ್ಕೆ ಉರುಳುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಧಾವಿಸಿದ್ದಾರೆ. ತಕ್ಷಣವೇ ಪೊಲೀಸರು, ಆರೋಗ್ಯ ಸಿಬ್ಬಂದಿಗೆ ವಿಚಾರ ತಿಳಿಸಿದ್ದಾರೆ. ಗಾಯಗೊಂಡಿರುವ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ